ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡುವಂತೆ ಎಂ.ಬಿ ಪಾಟೀಲ್ ಸಿ.ಎಂ ಗೆ ಮನವಿ.

103

ಬೆಂಗಳೂರು:- ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಇವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ್ ಮನವಿ ಪತ್ರ ನೀಡಿದ್ದಾರೆ.

ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್‍ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅವರು ಕೋರಿದ್ದಾರೆ.

ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಹೆಚ್ಚಿನ ಪ್ರಯೋಜನವಾಗುವದಿಲ್ಲ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿಯನ್ನು ಕಲ್ಪಿಸಲು

ಈ ಮೂಲಕ ವಿನಂತಿಸುತ್ತೇನೆ ಎಂದು ಎಂ.ಬಿ.ಪಾಟೀಲ್ ಮನವಿಯಲ್ಲಿ ಆಗ್ರಹಿಸಿದ್ದಾರೆ.

ವರದಿ :- ಪ್ರದೀಪ್ .ಜಿ.ಎಸ್.




Leave a Reply

Your email address will not be published. Required fields are marked *