ನಾಳೆ ಉತ್ತರ ಕನ್ನಡ ಜಿಲ್ಲೆಗೆ ನೂತನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ-ಪ್ರವಾಹ ಪರಿಸ್ಥಿತಿ ವೀಕ್ಷಣೆ.

893

ಬೆಂಗಳೂರು :- ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೊಮ್ಮಾಯಿಯವರು ತಮ್ಮ ಮೊದಲ ಭೇಟಿಯನ್ನು ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಮೀಸಲಿಟ್ಟಿದ್ದಾರೆ.

ಮುಖ್ಯಮಂತ್ರಿ ಕಾರ್ಯಾಲಯದ ಮಾಹಿತಿಯಂತೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುವ ಅವರು ರಸ್ತೆ ಮೂಲಕ ಯಲ್ಲಾಪುರಕ್ಕೆ ಬಂದು ನಂತರ ಯಲ್ಲಾಪುರ ಭಾಗದಲ್ಲಿ ಪ್ರವಾಹ ದಿಂದ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ ನಂತರ ಅಂಕೋಲದ ಮಂಜುಗುಣಿಗೆ ಭೇಟಿ ನೀಡಿ ಪ್ರವಾಹದಿಂದ ತೊಂದರೆಗೊಳಗಾದ ಪ್ರದೇಶವನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ನಾಳಿನ ಕಾರ್ಯಕ್ರಮದ ಕುರಿತು ಅಧಿಕೃತವಾಗಿ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಜಿಲ್ಲಾಡಳಿತಕ್ಕೆ ಟಿ.ಪಿ ಬರಬೇಕಿದ್ದು ಈಗಾಗಲೇ ಮೌಕಿಕವಾಗಿ ಮಾಹಿತಿ ನೀಡಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ