BREAKING NEWS
Search

ಶಿವಮೊಗ್ಗ ಮೂರು ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ:ಬೂದಿ ಮುಚ್ಚಿದ ಕೆಂಡದಂತಿದೆ ನಗರ!

680

ಶಿವಮೊಗ್ಗ :-ನಗರದಲ್ಲಿ ಗುರುವಾರ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ದೊಡ್ಡಪೇಟೆ, ತುಂಗಾನಗರ ಮತ್ತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಸ್ಥಳ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ನಿನ್ನೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಸಂಬಂಧಿಸಿದಂತೆ ಹಲ್ಲೆಯಿಂದಾಗಿ ಗಾಂಧಿ ಬಜಾರ್ ಸುತ್ತಮುತ್ತಲಿನ ಐದಾರು ಪ್ರದೇಶಗಳಲ್ಲಿ ಘರ್ಷಣೆ ನಡೆದಿದೆ.ಘರ್ಷಣೆ ಹಿನ್ನೆಲೆಯಲ್ಲಿ 3 ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದು ಅಗತ್ಯ ವಸ್ತುಗಳ ಖರೀದಿಗೆ 1 ಗಂಟೆಗಳ ಕಾಲ ಮಾತ್ರ ಅವಕಾಶ ಮಾಡಿಕೊಡಲಾಗಿದೆ.ಸದ್ಯ ಸ್ಥಳದಲ್ಲಿ ಶಾಂತಿಯುತವಾಗಿರುವ ಪರಿಸ್ಥಿತಿ ಇದ್ದರೂ
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಗಾಂದಿ ಬಜಾರ್ ರಸ್ತೆ ಬಂದ್

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪನವರು ಇಂದು ಆಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತ ನಾಗೇಶ್ ಆರೋಗ್ಯ ವಿಚಾರಿಸಿದರು.

ಘಟನೆ ಏನು?

ಶಿವಮೊಗ್ಗ ನಗರದಲ್ಲಿ ಬಜರಂಗ ದಳದ ಕಾರ್ಯಕರ್ತ ನಾಗೇಶ್ ಮೇಲೆ ನಿನ್ನೆ ಮುಂಜಾನೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ. ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಬಳಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಗ್ಗೆ ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿಕೊಂಡು ವಾಪಾಸ್ ಹೋಗುತ್ತಿದ್ದ ವೇಳೆ ಐದಾರೂ ಜನರು ಇದ್ದ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ನಾಗೇಶ್.

ಘಟನೆ ನಂತರ ನಗರದಲ್ಲಿ ಐದಾರೂ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿದೆ. ಐದಾರು ಕಾರುಗಳು, 2 ಆಟೋ, 2 ಬೈಕ್, ತರಕಾರಿ ಗಾಡಿಯನ್ನು ಜಖಂ ಗೊಳಿಸಲಾಗಿತ್ತು.

10 ಕ್ಕಿಂತ ಹೆಚ್ಚು ಜನರಿಗೆ ಗಾಯಗಳಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿನ್ನೆಯಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಗಾಂಧಿ ಬಜಾರ್, ಮೀನು ಮಾರುಕಟ್ಟೆ, ಚೋರ್ ಬಜಾರ್, ರವಿ ವರ್ಮ ಬೀದಿ, ಕಸ್ತೂರಾ ಬಾ ರಸ್ತೆಗಳಲ್ಲಿ ಕಿಡಿಗೇಡಿಗಳು ದುಷ್ಕತ್ಯ ನಡೆಸಿದ್ದಾರೆ.

ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡಿರುವ ಸುಮಾರು 10 ಕ್ಕಿಂತ ಹೆಚ್ಚು ಜನ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಂಧಿ ಬಜಾರ್ ಸುತ್ತಮುತ್ತ ನಿಲ್ಲಿಸಿದ್ದ, ಸುಮಾರು ಐದಕ್ಕೂ ಹೆಚ್ಚು ಕಾರುಗಳು ಜಖಂ ಗೊಳಿಸಲಾಗಿದೆ.

ಇಂದು ಪರಿಸ್ಥಿತಿ ಹೇಗಿದೆ?

ಸದ್ಯ ಕರ್ಫೂ ಜಾರಿ ಇರುವುದರಿಂದ ಇಡೀ ನಗರ ಬಿಕೋ ಎನ್ನುತ್ತಿದೆ.ತುರ್ತು ಅವಷ್ಯಕತೆ ಹೊರತುಪಡಿಸಿ ಎಲ್ಲವೂ ಬಂದ್ ಮಾಡಲಾಗಿದೆ.

ಬಿಗಿ ಪೊಲೀಸ್ ಬಂದವಸ್ತ್ ಕಲ್ಪಿಸಲಾಗಿದ್ದು ಇಡೀ ನಗರ ಪ್ರಕ್ಷುಬ್ಧವಾಗಿದೆ.

ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ಇಡೀ ನಗರ ಬೂದಿ ಮುಚ್ಚಿದ ಕೆಂಡದಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ