ಸಾಗರ:ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು

324

ಸಾಗರ:- ಎರಡು ಲಾರಿಗಳು ಪರಸ್ಪರ ಡಿಕ್ಕಿ ಯಾದ ಪರಿಣಾಮ ಮೂವರ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಬಳಿ ಇಂದು ಮುಂಜಾನೆ ನಡೆದಿದೆ.

ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಗ್ಯಾಸ್ ಲಾರಿಗೆ ಡಾಂಬರ್ ಲಾರಿ ಡಿಕ್ಕಿ ಯಾದಚಪರಿಣಾಮ ಎರಡೂ ಲಾರಿಗಳಲ್ಲಿ ಇದ್ದ ಮೂವರು ಸ್ಥಳದಲ್ಲೇ ಸಾವು ಕಂಡಿದ್ದು ಒಬ್ಬರಿಗೆ ತೀವ್ರಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಡಿಕ್ಕಿಯಿಂದಾಗಿ ರಸ್ತೆ ತುಂಬೆಲ್ಲಾ ಸಿಲೆಂಡರ್ ಬಿದ್ದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಆಗಮಿಸಿದ್ದು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!