add

ಶಿವಮೊಗ್ಗ ಜಿಲ್ಲೆಯಲ್ಲಿ 67 ಜನರಿಗೆ ಕರೋನಾ ಪಾಸಿಟಿವ್!ಮೂರು ಮಂದಿ ಇಂದು ಸಾವು!

878

ಶಿವಮೊಗ್ಗದಲ್ಲಿ ಇಂದು 67 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1080 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಮೂರು ಮಂದಿ ಸಾವುಕಂಡಿದ್ದಾರೆ.

ಜಿಲ್ಲಾವಾರು ಹೆಲ್ತ್ ಬುಲಟಿನ್ :-

ತೀರ್ಥಹಳ್ಳಿ ತಾಲೂಕು ಕಚೇರಿ ಸೀಲ್ ಡೌನ್ !

ತೀರ್ಥಹಳ್ಳಿ ತಾಲೂಕಿನ ಕೋಣಂದೂರು ನಾಡಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಾಗೂ ಮಂಡಗದ್ದೆಯ ನಾಡ ಕಛೇರಿ ಪ್ರಭಾರ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೋರ್ವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕು ಕಚೇರಿ, ಕೋಣಂದೂರು ಹಾಗೂ ಮಂಡಗದ್ದೆಯ ನಾಡ ಕಛೇರಿಗಳನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಕೊರೊನಾ ಧೃಡಪಟ್ಟ ಅಧಿಕಾರಿ ಕೋಣಂದೂರು, ಮಂಡಗದ್ದೆ, ತೀರ್ಥಹಳ್ಳಿ ಕಚೇರಿಗಳಲ್ಲಿ ನಿಕಟ ಸಂಪರ್ಕ ಹೊಂದಿದ್ದರಿಂದ ಅಲ್ಲದೆ ಜ್ವರದಂತಹ ಲಕ್ಷಣಗಳು ಕಂಡು ಬಂದ ನಂತರವೂ ಈ ಮೂರು ಕಛೇರಿಗಳಲ್ಲಿ ಓಡಾಡಿ ಕಾರ್ಯನಿರ್ವಹಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕು ಆಡಳಿತ ಈ ನಿರ್ಧಾರ ಕೈಗೊಂಡಿದೆ.

ತೀರ್ಥಹಳ್ಳಿ ತಾಲ್ಲೂಕು ಕಛೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು ಉಳಿದಂತೆ ಕೋಣಂದೂರು ಹಾಗೂ ಮಂಡಗದ್ದೆ ನಾಡ ಕಛೇರಿಗಳನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ