ಶಿವಮೊಗ್ಗ-ಸೈಕ್ಲಿಂಗ್ ಗೆ ಬಂದ ಯುವಕರು ಭದ್ರಾನದಿಯಲ್ಲಿ ಈಜಲು ಹೋಗಿ ಸಾವು

195

ಭದ್ರಾವತಿ:- ಈಜಲು ಭದ್ರಾ ನದಿಗೆ ಇಳಿದಿದ್ದ ಯುವಕ ತಂಡದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಭದ್ರಾವತಿಯ ದೊಡ್ಡ ಗೋಪೇನಹಳ್ಳಿ ಬಳಿಯ ಗೋಂಧಿ ಚಾನಲ್ ಆಂಜನೇಯ ಬಂಡೆ ಸಮೀಪ ಘಟನೆ ನಡೆದಿದ್ದು, ಇಬ್ಬರು ಪುರುಷರ ಶವವನ್ನು ಮೇಲಕ್ಕೆ ತೆಗೆಯಲಾಗಿದೆ.

ಜನ್ನಾಪುರದ ರಾಜೇಶ್ (38) ಹಾಗೂ ಮನೋಜ್ (17) ಎನ್ನುವವರು ಸಾವಿಗೀಡಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಒಟ್ಟು 9 ಯುವಕರ ಸೈಕಲಿಂಗ್’ಗೆ ತೆರಳಿದ್ದು, ಎಲ್ಲರೂ ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಗಾತ್ರದ ಸುಳಿಯಿದ್ದು, ಮನೋಜ್ ಇದಕ್ಕೆ ಸಿಲುಕಿ ಮುಳುಗುವ ಹಂತಕ್ಕೆ ಬಂದಾಗ ಸಹಾಯಕ್ಕಾಗಿ ಕೂಗಿದ್ದಾನೆ. ಈ ವೇಳೆ ರಾಜೇಶ್ ಎನ್ನುವವರು ರಕ್ಷಣೆಗೆ ಧಾವಿಸಿ, ಬಟ್ಟೆ ಕಟ್ಟಿ ಎಳೆಯಲು ಪ್ರಯತ್ನಿಸಿದ್ದಾರೆ. ಆದರೆ, ಅವರೂ ಸಹ ನೀರಿನ ಸುಳಿಗೆ ಸಿಲುಕಿ ಬಲಿಯಾಗಿದ್ದಾರೆ.

ಇದೇ ವೇಳೆ ನೀರಿನಲ್ಲಿ ಸಿಲುಕಿದ್ದ 13 ವರ್ಷದ ಕಾರ್ತಿಕ್ ಎನ್ನುವ ಬಾಲಕನನ್ನು ರಕ್ಷಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳೀಯ ಅಗ್ನಿ ಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ನದಿಯ ಸ್ಥಳ ಅಪಾಯಕಾರಿ ಪ್ರದೇಶವಾಗಿದ್ದು ಇಲ್ಲಿ ಈ ಹಿಂದೆಯೂ ಸಹ ಕೆಲವು ಮಂದಿ ನೀರಿನ ಸುಳಿಗೆ ಸಿಲುಕಿ ಜೀವ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ