ಶಿವಮೊಗ್ಗ ದಲ್ಲಿ ಕರೋನಾಕ್ಕೆ 4ಬಲಿ! ಎಲ್ಲೆಲ್ಲಿ ಸೀಲ್ ಡೌನ್ ಮಾಡಲಾಗಿದೆ ಗೊತ್ತಾ!

1023

ಶಿವಮೊಗ್ಗ :- ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಗೆ ಬಲಿಯಾದವರ ಸಂಖ್ಯೆ ಇಂದು 4 ಕ್ಕೆ ಏರಿಕೆಯಾಗಿದೆ.
ನಿನ್ನೆ ಮನೆಯಲ್ಲಿಯೇ ಮೃತಪಟ್ಟಿದ್ದ ವೃದ್ದನ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗದ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆಯೊಂದನ್ನು ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ. ಇನ್ನು, ಅಶೋಕನಗರದ 1ನೇ ಅಡ್ಡರಸ್ತೆ ಮತ್ತು ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿದೆ.

ಸೀಲ್ ಡೌನ್ ಪ್ರದೇಶದಲ್ಲಿ ಸ್ಯಾನಿಟೈಸರ್

ಜಿಲ್ಲೆಯಲ್ಲಿ ಸೀಲ್ ಡೌನ್ ಆದ ರಸ್ತೆಗಳಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಮನೆ, ಮಳಿಗೆ ಬಾಗಿಲುಗಳು, ಗೋಡೆಗೆ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ ಮನೆಯಿಂದ ಯಾರೂ ಹೊರ ಬಾರದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ನಿನ್ನೆ ಒಂದೇ ದಿನಕ್ಕೆ 23 ಫಾಸಿಟಿವ್ !

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 23 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸನಗರದಲ್ಲಿ 6, ಶಿವಮೊಗ್ಗದಲ್ಲಿ 4, ಭದ್ರಾವತಿಯಲ್ಲಿ 5, ಸೊರಬದಲ್ಲಿ 3 ಕೇಸ್ 23 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಪ್ರಕರಣ ಸಂಖ್ಯೆ 199ಕ್ಕೆ ಏರಿಕೆಯಾಗಿದ್ದು ಜನ ಭಯ ಪಡುವಂತೆ ಮಾಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ