ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 101 ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 2195 ಇದ್ದು ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಇಂದು 64 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಈ ಮೂಲಕ ಇದುವರೆಗೆ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆಯಾದವರು 1159 ಆಗಿದ್ದು 990 ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣವಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮೂರು ಸಾವು ಸಂಭವಿಸಿದೆ.ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ ಮೃತಪಟ್ಟವರು 46 ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಇಂದಿನ ತಾಲೂಕುವಾರು ವರದಿ:-
ಶಿವಮೊಗ್ಗ : 61
ಭದ್ರಾವತಿ : 14
ಶಿಕಾರಿಪುರ : 10
ಸಾಗರ : 10
ಹೊಸನಗರ : 02
ಸೊರಬ : 01

ಶಿವಮೊಗ್ಗ ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ ಹಲವು ಭಾಗದಲ್ಲಿ ಹಾನಿ

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದೆರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ಹೊಸನಗರ, ತೀರ್ಥಹಳ್ಳಿ ,ಸಾಗರ ಮತ್ತು ಸೊರಬ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ.
ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?
ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 535.10 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 38.40 ಮಿ.ಮೀ, ಭದ್ರಾವತಿಯಲ್ಲಿ 21 ಮಿ.ಮೀ, ತೀರ್ಥಹಳ್ಳಿ 104.40 ಮಿ.ಮೀ, ಸಾಗರ 55.60 ಮಿ.ಮೀ, ಶಿಕಾರಿಪುರ 12.60 ಮಿ.ಮೀ, ಸೊರಬ 92.30 ಮಿ.ಮೀ, ಹೊಸನಗರದಲ್ಲಿ 210.40 ಮಿ.ಮೀ ಮಳೆಯಾಗಿದೆ.
ಭಾರಿ ಗಾಳಿ ಮಳೆಗೆ ಮನೆ ಮೇಲೆ ಉರುಳಿ ಬಿದ್ದ ಮರ. ಅಪಾಯದಿಂದ ಮಗು ಪಾರು.

ಜಿಲ್ಲೆಯ ಹೊಸನಗರ ತಾಲೊಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡಿರುವ ಘಟನೆ ನಗರ ಹೋಬಳಿಯ ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂದ್ರಮನೆಯಲ್ಲಿ ನಡೆದಿದೆ.
ಘಟನೆಯಲ್ಲಿ ಮನೆಯಲ್ಲಿದ್ದ ಮಗು ಹಾಗೂ ನಾಲ್ವರು ಅಪಾಯದಿಂದ ಪಾರಾಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸುಶೀಲಮ್ಮ (60), ರತ್ನಮ್ಮ (50) ಎನ್ನಲಾಗಿದ್ದು, ಗಾಯಾಳು ಮಹಿಳೆಯರಿಗೆ ಮಾಸ್ತಿಕಟ್ಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಗಾಳಿ ಮಳೆಗೆ ಮರ ಮನೆ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದ್ದು, ವಾಸ ಮಾಡಲು ಸಾಧ್ಯವಾಗದಂತೆ ಆಗಿದೆ. ಸುಮಾರು 8 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಗರದಲ್ಲಿ ಅಬ್ಬರದ ಮಳೆ


ಸಾಗರ ತಾಲೂಕುನಲ್ಲೂ ಅಬ್ಬರದ ಮಳೆ ಸುರಿಯುತಿದ್ದು ಮಳೆಯ ಅಬ್ವರಕ್ಕೆ ವರದಾ ನದಿ ತುಂಬಿ ಹರಿಯುತ್ತಿದೆ.ಇನ್ನೆರೆಡು ದಿನ ಮಳೆ ಹೆಚ್ಚಾದಲ್ಲಿ ಪ್ರವಾಹದ ಭೀತಿ ಎದುರಾಗಲಿದೆ.
ಆನಂದಪುರ ಮತ್ತು ರಿಪ್ಪನ್ಪೇಟೆ ರಸ್ತೆಯಲ್ಲಿ ಮರ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು ಉಳಿದಂತೆ ಯಾವುದೇ ಹಾನಿ ಸಂಭವಿಸಿಲ್ಲ.