BREAKING NEWS
Search

ಶಿವಮೊಗ್ಗದಲ್ಲಿ ಸದ್ದು ಮಾಡಿದ ಗುಂಡು!ರೌಡಿಶೀಟರ್ ಮಾರ್ಕೆಟ್ ಲೋಕಿ ಮೇಲೆ ಪೊಲೀಸರಿಂದ ಫೈರಿಂಗ್!

576

ಶಿವಮೊಗ್ಗ : ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಮಾರ್ಕೆಟ್ ಲೋಕಿ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಶಿವಮೊಗ್ಗದ ಅಬ್ಬಲಗೆರೆ ಸಮೀಪ ನಡೆದಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಪೇದೆ ಗಾಯಗೊಂಡಿದ್ದಾರೆ.

4 ಕೊಲೆ ಕೇಸ್, ಒಂದು ಕೋಕಾ ಕಾಯ್ದೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಮಾರ್ಕೆಟ್ ಲೋಕಿ ಎಂಬಾತನ ಮೇಲೆ ಪೊಲೀಸರು ಇಂದು ಸಂಜೆ ಫೈರಿಂಗ್ ನಡೆಸಲಾಗುದ್ದು ನಂತರ ಆತನನ್ನು ಬಂಧಿಸಲಾಗಿದೆ.

ಈತ ಕಳೆದ ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಈತನ ಪತ್ತೆಗಾಗಿ ಪೊಲೀಸರು ತಂಡ ರಚಿಸಿ ಹುಡುಕಾಟ ನಡೆಸಿದ್ದರು. ಆದರೂ ಈತ ಪತ್ತೆಯಾಗಿರಲಿಲ್ಲ. ಇಂದು ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾರ್ಕೇಟ್ ಲೋಕಿ ಮಾರ್ಕೆಟ್ ಗಿರಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ಉಮೇಶ್ ಈಶ್ವರ ನಾಯ್ಕ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರು ಅಬ್ಬಲಗೆರೆ ಸಮೀಪ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬಳಸಿದ್ದ ಮಚ್ಚನ್ನು ಮುಚ್ಚಿಟ್ಟಿದ್ದ. ಈಗಾಗಿ ಇಂದು ಆತನನ್ನು ಸ್ಥಳ ಮಹಜರ್ ನಡೆಸಲು ಕರೆದುಕೊಂಡು ಹೋಗಿದ್ದರು.

ಈ ವೇಳೆ ಆರೋಪಿ ರೌಡಿಶೀಟರ್ ಮಾರ್ಕೆಟ್ ಲೋಕಿ ಪೊಲೀಸ್ ಪೇದೆ ಕಿರಣ್ ಎಂಬುವರ ಮೇಲೆ ಮಚ್ಚು ಬೀಸಿದ್ದಾನೆ. ಮಚ್ಚು ಬೀಸಿದ ರಭಸಕ್ಕೆ ಪೇದೆ ತೀವ್ರ ಗಾಯಗೊಂಡಿದ್ದಾರೆ.

ಪೊಲೀಸರು ತಮ್ಮ ಆತ್ಮರಕ್ಷಣೆಗೆ ಫೈರಿಂಗ್ ನಡೆಸಿದ್ದಾರೆ. ಡಿವೈಎಸ್ ಪಿ ಉಮೇಶ್ ಈಶ್ವರ್ ನಾಯ್ಕ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಪೇದೆ ಕಿರಣ್ ಹಾಗೂ ಆರೋಪಿ ರೌಡಿಶೀಟರ್ ಮಾರ್ಕೆಟ್ ಲೋಕಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *