ಶಿವಮೊಗ್ಗ ಜಿಲ್ಲೆಯಲ್ಲಿ ಆರು ಘಂಟೆ ನಂತರ ಕರ್ಫೂ ಜಾರಿ

592

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದಿನಿಂದ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮಾತ್ರ ವ್ಯಾಪಾರ ವ್ಯವಹಾರಗಳಿಗೆ ಅವಕಾಶ ಮಾಡಿಕೊಟ್ಟಿದ್ದು ನಂತರ ಕರ್ಫೂ ಜಾರಿ ಇರಲಿದೆ.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿ ಅಭಿಪ್ರಾಯ ಅಂಗ್ರಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲೆಯಲ್ಲಿ ಇಂದಿನಿಂದ ಒಂದು ವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ವ್ಯಾಪಾರ ವ್ಯವಹಾರಕ್ಕೆ ಅನುಕೂಲ ಮಾಡಿಕೊಡಲಿದ್ದು ಸಂಜೆ ಆರರ ನಂತರ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳ್ಳಲಿದೆ ಎಂದರು.

ಮಾಸ್ಕ ಧರಿಸದವರಿಗೆ ದಂಡ!

ಮಾಸ್ಕ್‌ ಧರಿಸದೇ ಓಡಾಡುವವರಿಗೆ ಸ್ಥಳದಲ್ಲಿಯೇ ರೂ.200 ದಂಡ ಮತ್ತು ರಾತ್ರಿ 8 ರ ನಂತರದಲ್ಲಿ ಅನಗತ್ಯವಾಗಿ ಸುತ್ತಾಡುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಸಾರ್ವಜನಿಕರು ಇದುವರೆಗೆ ಸಹಕರಿಸಿದ್ದಾರೆ. ಆದರೆ ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ಜಾರಿಯಾಗಲಿದೆ ಎಂದು ಹೇಳಿದ ಅವರು
ಒಂದು ವಾರ ಕಳೆದ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನವನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದರು.

ಇಂದು ನಡೆದ ಸಭೆಯಲ್ಲಿ ಒಟ್ಟು 42ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು. ಸರ್ಕಾರ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮದುವೆ, ಅಂತ್ಯಸಂಸ್ಕಾರಗಳಲ್ಲಿ ಮಾರ್ಗಸೂಚಿ ಉಲ್ಲಂಘನೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸರ್ಕಾರಿ ಕಚೇರಿಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇರಿಸಬೇಕು. ಖಾಸಗಿ ಬಸ್ ನಿಲ್ದಾಣದ ಶುಚಿತ್ವಕ್ಕೆ ಗಮನ ಹರಿಸಬೇಕು. ಹೊಟೇಲ್ ಮತ್ತು ಬೀದಿಬದಿ ತಿನಿಸು ವ್ಯಾಪಾರಸ್ಥರು ಒಮ್ಮೆ ಬಳಕೆ ಮಾಡುವ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಇರಿಸಬೇಕು. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕಡಿವಾಣ ಹಾಕಬೇಕು. ಕ್ವಾರೆಂಟೈನ್ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರರು ಉಪಸ್ಥಿತರಿದ್ದರು

ಇಂದು ಶಿವಮೊಗ್ಗ ಜಿಲ್ಲೆಯಲ್ಲಿ 30 ಕರೋನಾ ಪಾಸಿಟಿವ್ ಬರುವ ಸಾಧ್ಯತೆಗಳಿದ್ದು ಇಡೀ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಶಿವಮೊಗ್ಗ ಜಿಲ್ಲೆ ಆರು ಘಂಟೆ ನಂತರ ಕರ್ಫೂ ಜಾರಿಗೆ ಚಿಂತನೆ.ಅಧಿಕಾರಿಗಳು ಹಾಗೂ ವ್ಯಾಪಾರಸ್ತರ ಸಭೆಯಲ್ಲಿ ಸಚಿವ ಈಶ್ವರಪ್ಪ ಸೂಚನೆ.#shivamogga #COVID19 #SealDown #curfew

Posted by Kannadavani on Saturday, 4 July 2020



Leave a Reply

Your email address will not be published. Required fields are marked *