ಶಿವಮೊಗ್ಗ ಜಿಲ್ಲೆಯಲ್ಲಿ 96 ಕರೋನಾ ಪಾಸಿಟಿವ್!ಜಿಲ್ಲೆಯ ಪ್ರಮುಖ ಸುದ್ದಿಗಳು ಇಲ್ಲಿವೆ ನೋಡಿ

468

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 96 ಕೊರೊನಾ ಪಾಸಿಟಿವ್ ದೃಢಪಡುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1823ಕ್ಕೆ ಏರಿಕೆಯಾಗಿದೆ.

ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಇಂದು ಗುಣಮುಖರಾಗಿ ಬಿಡುಗಡೆಯಾದವರು 78 ಇದ್ದು
ಇದುವರೆಗೆ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆಯಾದವರು 1003 ಆಗಿದ್ದು ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಕೇಸ್ 820 ಆಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮೂರು ಜನ ಸಾವು ಕಂಡಿದ್ದಾರೆ.ಈ ಮೂಲಕ ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ತಾಲೊಕುವಾರು ವಿವರ ಹೀಗಿದೆ:-

ಶಿವಮೊಗ್ಗ : 62

ಭದ್ರಾವತಿ : 15

ಶಿಕಾರಿಪುರ : 09

ಸೊರಬ : 03

ಸಾಗರ : 03

ಹೊಸನಗರ : 01

ಕೊರೊನಾ ಸೋಂಕಿತ ವೃದ್ದನ ಬಗ್ಗೆ ಹುಟ್ಟಿತು ಗೊಂದಲ! ಕುಟುಂಬಸ್ತರು ಗೊಂದಲ?

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರದ 85 ವರ್ಷದ ವೃದ್ದರೊಬ್ಬರ ಪ್ರಕರಣ ಇದೀಗ ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದರೆ,ವೃದ್ದನ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ಹೌದು ಶಿಕಾರಿಪುರದ 85 ವರ್ಷದ ವೃದ್ದರೊಬ್ಬರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ವೃದ್ದನ ಕುಟುಂಬಸ್ಥರು ಇದೇ 18 ರಂದು ಚಿಕಿತ್ಸೆಗಾಗಿ ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಈ ವೇಳೆ ವೈದ್ಯರು ಚಿಕಿತ್ಸೆಗೂ ಮೊದಲು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದರು. 22 ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. ಈಕಾರಣದಿಂದ ಸೋಂಕು ಕಾಣಿಸಿಕೊಂಡ ಪರಿಣಾಮ 23 ರಂದು ಸೋಂಕಿತ ವೃದ್ದನನ್ನು ಕೋವಿಡ್-19 ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ದಾಖಲಾದ ನಂತರ ವೃದ್ದನ ಆರೋಗ್ಯ ವಿಚಾರಿಸಲು ಅವರ ಮನೆಯವರು ಆಸ್ಪತ್ರೆಗೆ, ಕೋವಿಡ್ ಸೆಂಟರ್ ಗಳಿಗೆ ಅಲೆದಾಡಿದ್ದಾರೆ. ಆದರೆ ವೃದ್ದನ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ದೊರೆಯಲಿಲ್ಲ.

29 ರಂದು ತಾಲೂಕು ಆರೋಗ್ಯಾಧಿಕಾರಿ ಅವರು ಮೃತನ ಮೊಮ್ಮಗನಿಗೆ ದೂರವಾಣಿ ಕರೆ ಮಾಡಿ ನಿಮ್ಮ ಅಜ್ಜ ಮೃತಪಟ್ಟಿದ್ದಾರೆ ಅವರ ಅಂತ್ಯಕ್ರಿಯೆಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಅವರೇ ನೆರವೇರಿಸಿದ್ದಾರೆ ಎಂದಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾದ ಕುಟುಂಬಸ್ಥರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ನಮಗೆ ತಿಳಿಸದೆ, ನಮ್ಮ ಗಮನಕ್ಕೆ ಬಾರದೇ ಹೇಗೆ ಅಂತ್ಯಕ್ರಿಯೆ ನಡೆಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಆದರೆ ಜಿಲ್ಲಾ ಆರೋಗ್ಯಾಧಿಕಾರಿಗಳು ಇಲ್ಲ ನಿಮ್ಮ ಅಜ್ಜ ಮೃತಪಟ್ಟಿಲ್ಲ.‌ ಕೋವಿಡ್-19 ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮೆಗ್ಗಾನ್ ಆಸ್ಪತ್ರೆ ಅವರು ದೊಡ್ಡಪೇಟೆ ಠಾಣೆಗೆ 28 ರಂದು ದೂರು ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೇ ಇಂದು ಪತ್ರಿಕಾ ಗೋಷ್ಟಿ ನಡೆಸಿದ ಜಿಲ್ಲಾಧಿಕಾರಿ ಅವರು ಸೋಂಕಿತ ವೃದ್ದ ಮೃತಪಟ್ಟಿಲ್ಲ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ. ಆದರೆ ತಾಲೊಕು ಆರೋಗ್ಯಾಧಿಕಾರಿ ಏಕೆ ಕುಟುಂಬಸ್ಥರಿಗೆ ಆ ರೀತಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನ ಕುಟುಂಬಸ್ತರಲ್ಲಿ ಆತಂಕ ಮೂಡಿಸಿದೆ.

ಸ್ವಾತಂತ್ರ್ಯೋತ್ಸವ ಆಯೋಜನೆಗೆ ಜಿಲ್ಲಾಡಳಿತ ಸಿದ್ಧತೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಪ್ರತಿವರ್ಷದಂತೆ ಈ ಬಾರಿಯೂ ಡಿಎಆರ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಬಾರಿ ಶಾಲಾ ಮಕ್ಕಳು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಬೇಕು. ಸಮಾರಂಭದ ಕೊನೆಯಲ್ಲಿ ಶಾಲಾ ಮಕ್ಕಳ ಬದಲಿಗೆ ಕನ್ನಡ ಮತ್ತು ಸಂಸ್ಕಂತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಬೇಕು.
ಸಮಾರಂಭದಲ್ಲಿ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಆಯ್ದ ಕೊರೋನಾ ವಾರಿಯರ್ಸ್‍ಗಳನ್ನು ಗೌರವಿಸಲಾಗುವುದು.

ಈ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸಲು ವ್ಯವಸ್ಥೆ ಮಾಡಬಹುದಾಗಿದೆ. ಇನ್ನುಳಿದಂತೆ ಪ್ರತಿ ವರ್ಷದಂತೆ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಯೋಜಿಸಬೇಕು. ಎಲ್ಲಾ ಪ್ರಮುಖ ವೃತ್ತಗಳನ್ನು ಹಾಗೂ ಸರ್ಕಾರಿ ಕಚೇರಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ