BREAKING NEWS
Search

ಶಿವಮೊಗ್ಗ-ಜಿಲ್ಲಾಪಂಚಾಯತ್ ಸದಸ್ಯನಮೇಲೆ ಹಲ್ಲೆ! ದೂರುಪ್ರತಿದೂರು?

278

ಶಿವಮೊಗ್ಗ : ಜಿಲ್ಲಾ ಪಂಚಾಯ್ತಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೊಕಿನ ಅರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದವರನ್ನು ಕೂಡ್ಲಿಗೆರೆ ಜಿ.ಪಂ. ಕ್ಷೇತ್ರದ ಸದಸ್ಯ ಮಣಿಖೇಖರ್ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಸದಸ್ಯ ಮಣಿಶೇಖರ್ ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಭದ್ರಾವತಿ ತಾಲೊಕಿನ ಅರಳಿಹಳ್ಳಿ ಗ್ರಾಮದಲ್ಲಿ ಕೆರೆಯ ಹೂಳು ತೆಗೆಯುವ ಕಾಮಗಾರಿ ನಡೆಯುತಿತ್ತು. ಈ ವೇಳೆ ಸದಸ್ಯ ಮಣಿಶೇಖರ್ ಜಿಲ್ಲಾ ಪಂಚಾಯ್ತಿ ವತಿಯಿಂದ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾಮಗಾರಿ ವೀಕ್ಷಣೆಗೆ ತೆರಳಿದ್ದರು.

ಆದರೆ ಗ್ರಾಮದ ಮಲ್ಲಿಕಾರ್ಜುನ ಹಾಗೂ ಆತನ ಸಹೋದರ ಕೆರೆ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಗಲಾಟೆಗೆ ಮುಂದಾಗಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ನನ್ನ ಮೇಲೆ ಗ್ರಾಮದ ಯುವಕರ ಗುಂಪು ಕಲ್ಲು ಎತ್ತಿ ಹಾಕಿ ಹತ್ಯೆಗೆ ಯತ್ನ ನಡೆಸಿದರು ಎಂದು ಜಿ.ಪಂ. ಸದಸ್ಯ ಮಣಿಶೇಖರ್ ಗಂಭೀರ ಆರೋಪ ಮಾಡಿದ್ದಾರೆ.

ಇನ್ನು ಹಲ್ಲೆಗೊಳಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜಿ.ಪಂ. ಸದಸ್ಯನನ್ನು ಮಾಜಿ ಶಾಸಕ ಅಪ್ಪಾಜಿಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.




Leave a Reply

Your email address will not be published. Required fields are marked *