add

BrekingNews|ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಬೆಂಕಿ ಅವಘಡ:ಕೋಟಿ ರುಪಾಯಿ ಹಾನಿ!

379

ಶಿವಮೊಗ್ಗ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಅಂಗಡಿಯೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ನಡೆದಿದೆ.

ಇಲ್ಲಿನ ಮಾತಾ ನಾವೇಲ್ಟಿಸ್ ಎಂಬ ಸೌಂದರ್ಯ ವರ್ಧಕದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು ಅಂಗಡಿ ಮಾಲೀಕ ಮೋಹನ್ ನಿನ್ನೆ ರಾತ್ರಿ ಅಂಗಡಿ ಬಂದ್ ಮಾಡಿ‌ ಮನೆಗೆ ತೆರಳಿದ್ದರು.

ಈವೇಳೆ ವಿದ್ಯತ್ ಷಾರ್ಟ ಸೆರ್ಕ್ಯೂಟ್ ನಿಂದ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಈಡಿ ಅಂಗಡಿಯನ್ನೇ ಆವರಿಸಿಕೊಂಡಿದ್ದು ಸಂಪೂರ್ಣ ಸುಟ್ಟುಹೋಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಿಂದಾಗಿ ಸುಮಾರು ಒಂದೂವರೆಯಿಂದ ಎರಡು ಕೋಟಿ ರೂ‌ ನಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹಾಗೂ ಶಿವಮೊಗ್ಗ ಉಪ ವಿಭಾಧಿಕಾರಿ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀಡಿಯೋ ನೋಡಲು ಕೆಳಗಿನ ಲಿಂಕ್ ಬಳಸಿ.:-

https://www.facebook.com/kannadavani.news/videos/262030188676801/




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ