ತೀರ್ಥಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ.

202

ತೀರ್ಥಹಳ್ಳಿ :- ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತಿದ್ದ KSRTC ರಾಜಹಂಸ ಬಸ್ ಚಾಲಕನ ನಿಯಂತ್ರಣ ತೀರ್ಥಹಳ್ಳಿ ತಾಲೂಕಿನ ಮಾಳೂರು ಕ್ರಾಸ್‍ನಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಕುಪ್ಪಳಿಗೆ ತೆರಳುತ್ತಿದ್ದ KSRTC ಬಸ್ ಪಲ್ಟಿಯಾಗಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಬಸ್ಸಿನಲ್ಲಿದ್ದವರನ್ನು ರಕ್ಷಿಸಿ, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನೆ ಸಂಬಂಧ ತೀರ್ಥಹಳ್ಳಿಯ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ