ಶಿವಮೊಗ್ಗ ಸ್ಥಳೀಯ ಸಂಸ್ಥೆ ಚುನಾವಣೆ:ಗೆಲವು,ಸೋಲು ಯಾರಿಗೆ ವಿವರ ಇಲ್ಲಿದೆ

169

ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿ ಪಕ್ಷ ,ಸ್ಥಳೀಯ ಸಂಸ್ಥೆ ಚುನಾವಣೆ ಯಲ್ಲಿ ಮುಗ್ಗರಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು,ಕಾಂಗ್ರೆಸ್ ಮೈತ್ರಿ ಅಧಿಕಾರದ ಗದ್ದುಗೆ ಹಿಡಿದಿದೆ.

ಶಿಕಾರಿಪುರ ಪುರಸಭೆ

ಶಿಕಾರಿಪುರ ಪುರಸಭೆಯ 23 ಸ್ಥಾನಗಲ್ಲಿ ಕಾಂಗ್ರೇಸ್ 12,ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 8 ಸ್ಥಾನಗಳಿಗೆ ತೃಪ್ತಿಪಟ್ಟಿಕೊಳ್ಳಬೇಕಾಗಿದೆ.ಮೂರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಶಿರಾಳಕೊಪ್ಪ ಪಟ್ಟಣ ಪಂಚಾಯತ್

ಶಿರಾಳಕೊಪ್ಪ ಕೂಡ ಕಾಂಗ್ರೇಸ್ ಮೈತ್ರಿ ಪಾಲಾಗಿದೆ.ಒಟ್ಟು 12 ಸ್ಥಾನಗಳಲ್ಲಿ
ಕಾಂಗ್ರೇಸ್ 07,ಬಿಜೆಪಿ 02,ಜೆಡಿಎಸ್03,ಪಕ್ಷೇತರ ಪಾಲಾಗಿದೆ.

ಸೊರಬ

ಸೊರಬದಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಬಿಜೆಪಿ ಭೇದಿಸಿದೆ.ಒಟ್ಟು 11 ಸ್ಥಾನಗಳಲ್ಲಿ ಬಿಜೆಪಿ 06,ಕಾಂಗ್ರೆಸ್04,ಜೆಡಿಎಸ್ 01 ,ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಸಾಗರ ನಗರಸಭೆ

ಸಾಗರ ನಗರಸಭೆ ಈ ಬಾರಿ ಬಿಜೆಪಿ ಪಾಲಾಗಿದೆ.ಒಟ್ಟು 31 ಸ್ಥಾನಗಳಲ್ಲಿ ಬಿಜೆಪಿ -16,
ಕಾಂಗ್ರೆಸ್ -09,
ಜೆಡಿಎಸ್ – 01,
ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಹೊಸನಗರ ಪಟ್ಟಣ ಪಂಚಾಯತ್

ಹೊಸನಗರ ಪಟ್ಟಣ ಪಂಚಾಯಿತಿ ಚುನಾವಣೆ ಯಲ್ಲಿ ಈ ಬಾರಿ ಕಾಂಗ್ರೆಸ್ ಮೈತ್ರಿ ಮೇಲುಗೈ ಸಾಧಿಸಿದೆ.
ಒಟ್ಟು 11 ಸ್ಥಾನಗಳಲ್ಲಿ ಕಾಂಗ್ರೆಸ್ 04,
ಬಿಜೆಪಿ -೦4
ಜೆಡಿಎಸ್- 03 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.




Leave a Reply

Your email address will not be published. Required fields are marked *

error: Content is protected !!