BREAKING NEWS
Search

ಸಾಗರ:ಭರ್ಜರಿ ಕಳ್ಳರ ಬೇಟೆ 16₹ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡ ಪೊಲೀಸರು!

1661

ಶಿವಮೊಗ್ಗ ಜಿಲ್ಲೆ ಸಾಗರದ ಪೇಟೆ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಸಾಗರ, ಶಿವಮೊಗ್ಗ ವ್ಯಾಪ್ತಿಯ ಹಲವೆಡೆ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಪತ್ತೆ ಹಚ್ಚಿ 7 ಬೈಕ್ ಹಾಗು 1 ಕಾರು ವಶಪಡಿಸಿಕೊಂಡಿದ್ದಾರೆ.

ಇಂದು ಬೆಳಗ್ಗಿನ ಜಾವ ವರದಹಳ್ಳಿ ಸರ್ಕಲ್ ಬಳಿ ವಾಹನ ತಪಾಸಣೆ ವೇಳೆ ಅನುಮಾನದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಶಿವಮೊಗ್ಗದ ನಿವಾಸಿಗಳಾದ ತಾಜುದ್ಧೀನ್ (22), ಅರ್ಷದ್ (28) ಬಂಧಿತ ಆರೋಪಿಗಳು.
ಆರೋಪಿಗಳಿಂದ ಸಾಗರ ವ್ಯಾಪ್ತಿಯಲ್ಲಿ 1 ಕಾರು 3 ಬೈಕ್ ಕಳ್ಳತನ, ಶಿವಮೊಗ್ಗ ವ್ಯಾಪ್ತಿಯಲ್ಲಿ 4 ಬೈಕ್ ಕಳ್ಳತನ ಪ್ರಕರಣ ಪತ್ತೆಯಾಗಿದೆ.

ಒಟ್ಟು 8 ಪ್ರಕರಣಗಳಲ್ಲಿ 16.40.000₹ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *