ಶಿವಮೊಗ್ಗ ದಲ್ಲಿ 55 ಕರೋನಾ ಪಾಸಿಟಿವ್ -ಸಾವಿನ ಸಂಖ್ಯೆ 22 ಕ್ಕೆ ಏರಿಕೆ!

539

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 67 ಮಂದಿ ಕರೋನದಿಂದ ಗುಣವಾಗಿದ್ದಾರೆ. 55 ಕರೋನ ಪಾಸಿಟಿವ್ ಪ್ರಕರಣ ಇಂದು ಪತ್ತೆಯಾಗಿದೆ.

ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ ವಿವರ ಇಲ್ಲಿದೆ.

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

46 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 46 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 295 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 15 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಳೆ ಎಂದಿನಂತೆ ಲಾಕ್ ಡೌನ್ ಜಿಲ್ಲೆಯಲ್ಲಿ ಇರಲಿದೆ.ಇಂದು

ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗ್ಗೆ ಐದು ಗಂಟೆಯವರೆಗೆ ಲಾಕ್ ಡೌನ್ ಇರಲಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ