ಹಸು ಕೊಳ್ಳುವ ನೆಪದಲ್ಲಿ ಕಳ್ಳತನ-ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳರು

41

ಶಿವಮೊಗ್ಗ ಜಿಲ್ಲೆಯ ಸೊರಬ ದಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದ ದರೋಡೆಕೋರರ ತಂಡದ ಹೆಡೆಮುರಿ ಕಟ್ಟುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾವೇರಿಯ ಅಕ್ಕಿ ಆಲೂರು ಪ್ರಶಾಂತ್ (20), ಜಡೆ ಮಂಗಾಪುರದ ಪ್ರಶಾಂತ್ (20), ಮೈಸೂರಿನ ಗಣೇಶ್ (22) ಬಂಧಿತರು. ಅಕ್ಟೋಬರ್ 14ರಂದು ಛತ್ರದಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದರೋಡೆ ಮಾಡಿದ್ದರು.

ಹಸು ಖರೀದಿ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ ದರೋಡೆಕೋರರು, ಮಹಿಳೆ ಮನೆಯಿಂದ ಹೊರಗೆ ಬರುವಂತೆ ಮಾಡಿ, ಹಲ್ಲೆ ನಡೆಸಿದ್ದರು. ಆಕೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ಈಗ ಈ ಕಳ್ಳರನ್ನು ಬಂಧಿಸಿದ್ದು ಹಲವು ಕಡೆ ಕಳ್ಳತನ ಮಾಡಿರುವ ಕುರಿತು ತನಿಖೆ ಕೈಗೊಳ್ಳಲಾಗಿದೆ.
Leave a Reply

Your email address will not be published. Required fields are marked *