ಸಿದ್ದಾಪುರ:-ಸಿದ್ದಾಪುರ ನಗರದ ಬಸ್ ನಿಲ್ದಾಣದ ಬಳಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ಕಳ್ಳತನವಾದ ಘಟನೆ ಇಂದು ಬೆಳಕಿಗೆ ಬಂದಿದೆ.ಕಛೇರಿಯ ಬೀಗ ಹಾಗು ಕಿಟಕಿ ಸರಳುಗಳನ್ನು ಮುರಿದು ಕಳ್ಳರು ಒಳಹೋಗಿದ್ದು ಸುಮಾರು 2 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನವಾಗಿದೆ.

ಸ್ಥಳಕ್ಕೆ ಸಿದ್ದಾಪುರ ಠಾಣೆ ಪೊಲೀಸರು ಹಾಜುರಾಗಿ ಹತ್ತಿರದಲ್ಲಿರೋ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.