ಶಿರಸಿ:ಅತೀ ವೇಗದ ಬೈಕ್ ಚಾಲನೆ ಸ್ಥಳದಲ್ಲೇ ಸಾವು!

1159

ಅತಿ ವೇಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನೊರ್ವ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.

ಆಸಿಫ್ ಶುಕುರ್ ಶೇಖ್ (೨೫) ಮೃತಪಟ್ಟ ಯುವಕನಾಗಿದ್ದಾನೆ. ಶಿರಸಿ ನಗರದ ಝೂ ಸರ್ಕಲ್ ಬಳಿ ತಾಯಿಯೊಂದಿಗೆ ಅತಿ ವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದು ತಲೆ ನೆಲಕ್ಕೆ ಜಜ್ಜಿದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!