ಶಿರಸಿ:ಅಂಗ್ಲ ಮಾಧ್ಯಮದಲ್ಲಿ ಕಲಿಯಲು ಬಂದ ಮಕ್ಕಳನ್ನು ಹೊರಹಾಕಿದ ಸರ್ಕಾರಿ ಶಾಲೆ!

1007

ಕಾರವಾರ :- ತಮ್ಮ ಮಕ್ಕಳು ಒಳ್ಳೆ ಶಾಲೆಯಲ್ಲಿ ಕಲಿಬೇಕು, ಅದ್ರಲ್ಲೂ ಇಂಗ್ಲಿಷ್ ಮೀಡಿಯಮ್ ನಲ್ಲಿ ಕಲಿಬೇಕು ಎನ್ನುವ ಆಸೆ ಪ್ರತಿ ಪೋಷಕರಲ್ಲಿಯೂ ಇರುತ್ತೆ. ಹಾಗಯೇ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಲಕ್ಷ ಲಕ್ಷ ಡೊನೇಷನ್ ಕೊಟ್ಟು ಖಾಸಗಿ ಶಾಲೆಗೆ ಸೇರಿಸುತ್ತಾರೆ.

ಆದ್ರೆ ಬಡತನವಿರುವ ಜನರಿಗೆ ಮಾತ್ರ ಇದು ಮರಿಚಿಕೆ ಈ ಕಾರಣದಿಂದ ಸರ್ಕಾರಿ ಶಾಲೆಗಳಲ್ಲಿ ಸಹ ಇಂಗ್ಲಿಷ್ ಮಾಧ್ಯಮಕ್ಕೆ ಅವಕಾಶ ಮಾಡಿಕೊಟ್ಟಿದೆ.

ಈ ವರ್ಷ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ 26 ಕಡೆಗಳಲ್ಲಿ ಒಂದನೇ ತರಗತಿಯಿಂದ ಸರ್ಕಾರಿ ಶಾಲೆಯಲ್ಲಿಯೂ ಆಂಗ್ಲ ಮಾಧ್ಯಮ ಪ್ರಾರಂಭವಾಗಿದೆ.

ಆದ್ರೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಾಸಕರ ಮಾದರಿ ಶಾಲೆಯಲ್ಲಿ ಎರಡು ವಾರದ ಹಿಂದೆ ಬಡ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮಕ್ಕೆ ಪ್ರವೇಶ ನೀಡಲಾಗಿತ್ತು .

ಸರ್ಕಾರದ ಮಾರ್ಗದರ್ಶನದಂತೆ 30 ಜನರನ್ನು ಮಾತ್ರ ಅಗತ್ಯ ದಾಖಲೆಯೊಂದಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು .ಇದರಂತೆಯೇ ಹಲವು ಪೊಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೆ ದಾಖಲು ಮಾಡಿದ್ರು. ಇನ್ನು ಶಾಲೆ ಉತ್ತಮವಾಗಿದ್ದರಿಂದ ಖಾಸಗಿ ಆಂಗ್ಲ ಶಾಲೆಯಲ್ಲಿ ಕಲಿತ ಮಕ್ಕಳು ಸಹ ಇಲ್ಲಿ ಪ್ರವೇಶ ಪಡೆದಿದ್ದಾರೆ.

ಇದರಿಂದಾಗಿ 30 ಮಕ್ಕಳ ಸಂಖ್ಯೆ ಏಕಾಏಕಿ 69 ಕ್ಕೆ ಏರಿಕೆಯಾಗಿದೆ. ಸರ್ಕಾರದ ಮಾರ್ಗದರ್ಶಿಯಂತೆ 30 ಜನರಿಗೆ ಮಾತ್ರ ಅವಕಾಶವಿದ್ದು 39 ಮಕ್ಕಳು ಹೆಚ್ಚುವರಿಯಾಗಿ ಸೇರಿಕೊಂಡಿದ್ದಾರೆ. ಹೀಗಾಗಿ ಅಲ್ಲಿನ ಆಡಳಿತ ಮಂಡಳಿ( sdmc) ಹಾಗೂ ಮುಖ್ಯ ಶಿಕ್ಷಕರು ತಮಗೆ ಬೇಕಾದವರಿಗೆ ಮಾತ್ರ ಅವಕಾಶ ಕಲ್ಪಿಸಿ ಉಳಿದ ಮಕ್ಕಳನ್ನು ಎರಡು ವಾರಗಳ ಕಾಲ ಆಂಗ್ಲ ಮಾಧ್ಯಮದಲ್ಲಿ ಕಲಿಯುತಿದ್ದರೂ ಶಾಲೆಯಿಂದ ಹೊರಹಾಕಿದ್ದಾರೆ.

ಇದನ್ನು ಪ್ರಶ್ನಿಸಿ ಪೂಷಕರು ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಬಳಿ ಹೋದರೂ ಯಾವುದೇ ಪರಿಹಾರ ನೀಡದೇ ಕನ್ನಡ ಮಾಧ್ಯಮಕ್ಕೆ ಸೇರಿಸಿ ಎಂದು ನುಣಿಚಿಕೊಂಡಿದ್ದಾರೆ.

ಶಾಸಕರಿಗೆ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ.
ಇನ್ನು ನಿಯಮದಂತೆ ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿಕೊಂಡು ಈಗ ಮಕ್ಕಳನ್ನು ಹೊರಹಾಕಲಾಗಿದೆ ,ತಮಗೆ ಬೇಕಾದ ಮಕ್ಕಳಿಗೆ ಅವಕಾಶ ಕೊಡಲಾಗಿದೆ ,ಸಂಖ್ಯೆ ಹೆಚ್ಚಾದಾಗ ಕೊನೆ ಪಕ್ಷ ಚೀಟಿ ಎತ್ತುವ ಮೂಲಕವಾದ್ರೂ ಆಯ್ಕೆ ಮಾಡಬಹುದಿತ್ತು ಆದರೇ ಅದನ್ನು ಕೂಡ ಮಾಡಲಿಲ್ಲ ಎಂದು ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಮನವಿ ಮಾಡಿದ್ದಾರೆ.

ಆದರೇ ಈ ವರೆಗೂ ಯಾವದೇ ಪ್ರತಿಕ್ರಿಯೆ ನೀಡದೇ ತಿರುಚಿಕೊಂಡಿದ್ದು ತಮ್ಮ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಕಲಿಯುತ್ತಾರೆಂಬ ಆಸೆ ಹೊತ್ತು ಈ ಶಾಲೆಗೆ ಸೇರಿಸಿದ ಪೋಷಕರು ಶಾಲೆಗೆ ಹಿಡಿ ಶಾಪ ಹಾಕುವಂತಾಗಿದೆ. ತಕ್ಷಣದಲ್ಲಿ ಈ ಕುರಿತು ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಂಡು ಬಡ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕಿದೆ.
Leave a Reply

Your email address will not be published. Required fields are marked *

error: Content is protected !!