ಉಡುಪಿ ಕೃಷ್ಣನಿಗೆ 100 ಕೆಜಿ ಜಿನ್ನದ ಗೋಪುರ!

139

ಉಡುಪಿ:- ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಯನ್ನು ಚಿನ್ನದ ಗೋಪುರ ಮಾಡುವ ಮೂಲಕ, ಕರಾವಳಿಯ ಮೂರನೇ ಚಿನ್ನದ ದೇಗುಲ ಎಂಬ ಕೀರ್ತಿಗೆ ಪಾತ್ರವಾಗಿದೆ.

40 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಚಿನ್ನದ ಗೋಪುರದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಶಿಖರ ಪ್ರತಿಷ್ಟೆ ಮಾಡಿ ಅಭಿಷೇಕ ಮಾಡಲಾಯ್ತು.

ಪರ್ಯಾಯ ಪಲಿಮಾರು ಶ್ರೀ ತಮ್ಮ ಪರ್ಯಾಯ ಮಹೋತ್ಸವದ ಕೀರ್ತಿ ಶಾಶ್ವತಗೊಳಿಸಲು ಈ ಮಹತ್ವದ ಯೋಜನೆ ಪೂರೈಸಿದ್ದಾರೆ.
ಈ ಮೂಲಕ ಪಲಿಮಾರು ಶ್ರೀಗಳ ಆ ಮಹತ್ವಕಾಂಕ್ಷಿ ಯೋಜನೆ ಈಡೇರಿದೆ. ಶ್ರೀ ಕೃಷ್ಣನಿಗೆ ಚಿನ್ನದ ಗೋಪುರ ಸಮರ್ಪಣೆಯಾಗಿದೆ. ಕಳೆದ 10 ದಿನಗಳಿಂದ ಸುವರ್ಣ ಗೋಪುರ ಸಮರ್ಪಣೆ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಾ ಬಂದಿದ್ದವು. ಇಂದು ಚಿನ್ನದ ಶಿಖರ ಪ್ರತಿಷ್ಟೆ ಮಾಡಲಾಯಿತು. ಒಂದು ಸಾವಿರ ಬೆಳ್ಳಿ ಕಳಶಗಳಿಂದ ಗಂಗಾತೀರ್ಥದ ಅಭಿಷೇಕ ಸಲ್ಲಿಸಲಾಯಿತು. ಪುತ್ತಿಗೆ ಶ್ರೀ ಹೊರತು ಪಡಿಸಿದಂತೆ ಪೇಜಾವರ ಶ್ರೀಗಳ ಸಹಿತ ಅಷ್ಟಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಚಿನ್ನದ ಕಳಶದಿಂದ ಶಿಖರಕ್ಕೆ ಅಭಿಷೇಕ ಮಾಡಿಲಾಯಿತು. ಪಲಿಮಾರು ಶ್ರೀಗಳು ಕೃಷ್ಣನ ಗೋಪುರ ಸುವರ್ಣಮಯವಾಗಿ ಇರಬೇಕೆಂದು ಈ ಯೋಜನೆ ಮಾಡಿದ್ದರು , 2500 ಚದರಡಿ ಸುವರ್ಣ ಗೋಪುರಕ್ಕೆ 200 ಕೆ.ಜಿ ತಾಮ್ರ, 800 ಕೆ.ಜಿ ಬೆಳ್ಳಿ, 100 ಕೆ.ಜಿ ಚಿನ್ನವನ್ನು ಬಳಕೆ ಮಾಡಲಾಗಿದೆ. ಸುಮಾರು 40 ಕೋಟಿ ರೂ.ವೆಚ್ಚದ ಯೋಜನೆ ಇದಾಗಿದೆ ಶ್ರೀ ಕೃಷ್ಣನಿಗೆ ಸುವರ್ಣ ತೊಟ್ಟಿಲು, ವಜ್ರ ಕಿರೀಟ, ಸುವರ್ಣ ರಥ ಸಮರ್ಪಿಸಿದರು.
ಈಗಿನ ಪರ್ಯಾಯ ಪಲಿಮಾರು ಶ್ರೀಗಳು ತಮ್ಮ ಮೊದಲ ಪರ್ಯಾಯದಲ್ಲಿ ವಜ್ರ ಕವಚ ಅರ್ಪಿಸಿದ್ದರು. ಹೋಮ ಹವನ ಸೇರಿದಂತೆ ಧಾರ್ಮಿಕ ಕಾರ್ಯಗಳು ನಡೆಯಿತು.




Leave a Reply

Your email address will not be published. Required fields are marked *

error: Content is protected !!