BREAKING NEWS
Search

ಭಯ ಹುಟ್ಟಿಸಿದ್ದ ದೈತ್ಯ ಗಂಡು ಚಿರತೆ ಕೊನೆಗೂ ಸೆರೆ!

216

ಉಡುಪಿ:- ಕೆಲವು ತಿಂಗಳುಗಳಿಂದ ನಿರಂತರವಾಗಿ ಉಡುಪಿಯ ಕುಂದಾಪುರದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಗಂಡು ಚಿರತೆ ಕೊನೆಗೂ ಬೋನಿಗೆ ಕೆಡವುವಲ್ಲಿ ಅರಣ್ಯ ಇಲಾಖೆ ಸಫಲವಾಗಿದೆ.

ಕುಂದಾಪುರ ತಾಲೂಕಿನ ಶಂಕರನಾರಾಯಣ ಅರಣ್ಯ ಇಲಾಖೆ ವ್ಯಾಪ್ತಿಯ ಯಡ್ಯಾಡಿ ಮತ್ಯಾಡಿ ಗ್ರಾಮದಲ್ಲಿ ಚಿರತೆ ಉಪಟಳ ಹೆಚ್ಚಿದ್ದು, ಸಾಕು ಪ್ರಾಣಿಗಳು ಬಲಿಯಾಗುತ್ತಿದ್ದವು.

ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಯವರು ಕಳೆದ ತಿಂಗಳು ಚಂದ್ರಾವತಿ ಗುಡ್ಡೆಮನೆ ಎನ್ನುವರ ಜಾಗದಲ್ಲಿ ಬೋನು ಇರಿಸಿದ್ದರು.

ಇಂದು ಬೆಳಿಗ್ಗೆ ಇರಿಸಿದ್ದ ಬೋನಿಗೆ ಬಿದ್ದಿದೆ. ಸೆರೆಸಿಕ್ಕ ಚಿರತೆಯನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿ ಕೊಲ್ಲೂರು ಅಭಯಾರಣ್ಯಕ್ಕೆ ರವಾನಿಸಿದ್ದಾರೆ.

ಸುಮಾರು 5 ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಅರಣ್ಯಾಧಿಕಾರಿ ಚಿರತೆಯನ್ನು ಪರಿಶೀಲಿಸಿ ಆರೋಗ್ಯವಾಗಿರುವುದನ್ನು ಮನಗಂಡು ಅಭಯಾರಣ್ಯ ಬಿಟ್ಟಿದ್ದಾರೆ.
Leave a Reply

Your email address will not be published. Required fields are marked *