BREAKING NEWS
Search

ಭಟ್ಕಳ ಲಾರಿ ಡಿಕ್ಕಿ: ಹೊತ್ತಿ ಉರಿದ ಲಾರಿ.

959

ಕಾರವಾರ :- ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಡೀಸೆಲ್ ಟ್ಯಾಂಕಿಗೆ ಬೆಂಕಿ ತಗುಲಿ ರಸ್ತೆ ಮಧ್ಯೆದಲ್ಲಿಯೇ ಹೊತ್ತಿಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ.

ಕೇರಳ ಹಾಗೂ ಕರ್ನಾಟಕದ ಬಿಜಾಪುರ ಮೂಲದ ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು
ಅಪಘಾತದ ನಂತರ ಡೀಸೆಲ್ ಟ್ಯಾಂಕ್ ಗೆ ಬೆಂಕಿ ತಗುಲಿದ ಪರಿಣಾಮ ಹೊತ್ತಿಉರಿದು ಲಾರಿ ಸಂಪೂರ್ಣ ಬಸ್ಮವಾಗಿದೆ.ಎರಡು ಲಾರಿಯಲ್ಲಿದ್ದ ಚಾಲಕ ಹಾಗೂ ‌ಕ್ಲೀನರ್ ಅಪಾಯದಿಂದ ಪಾರಾಗಿದ್ದು
ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




Leave a Reply

Your email address will not be published. Required fields are marked *