add

ನಮಗಾಗಿ ವೈದ್ಯರು ದೇವರಲ್ಲಿ ಪ್ರಾರ್ಥನೆ ಮಾಡಿದ್ರು-ಕೊರೋನಾ ಸೊಂಕನ್ನು ಜಯಿಸಿ ಬಂದ ಭಟ್ಕಳದ ವ್ಯಕ್ತಿಗಳ ಮನದಾಳ ಮಾತುಗಳೇನು ಗೊತ್ತಾ?

1716

ಕಾರವಾರ :- ಮಹಾಮಾರಿ ಕೊರೋನಾ‌ ಸೋಂಕಿನಿಂದ ಗುಣಮುಖಗೊಂಡು ಮತ್ತೆ ಹೊಸ‌ ಜೀವನ ಪಡೆದುಕೊಂಡ ಉತ್ತರಕನ್ನಡ ಜಿಲ್ಲೆಯ ಭಟ್ಕಳದ‌ ಇಬ್ಬರು ನಿವಾಸಿಗಳು ತಮ್ಮ ಸಂತೋಷ ಹಂಚಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆಯೇ ಕಾರವಾರದ ನೌಕಾನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ರೋಗಿ ಸಂಖ್ಯೆ 36 ಹಾಗೂ ಇಂದು ಡಿಸ್ಚಾರ್ಜ್ ಆಗಿರುವ ಸೋಂಕಿತ ರೋಗಿ ಸಂಖ್ಯೆ 98 ಮತ್ತೆ ಆರೋಗ್ಯವಂತರಾಗಿ ಮರಳಿರುವುದಕ್ಕೆ ದೇವರು, ಜಿಲ್ಲಾಡಳಿತ, ವೈದ್ಯರು ಹಾಗೂ ಪೊಲೀಸರಿಗೆ ಧನ್ಯವಾದ ಅರ್ಪಿಸಿದ್ದಾರೆ.

“ದೇವರ ದಯೆಯಿಂದ ಗುಣಮುಖರಾಗಿದ್ದೇವೆ. ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಸಂತೋಷದ ಅನುಭವವಾಗುತ್ತಿದೆ. ಆಸ್ಪತ್ರೆಯಲ್ಲೂ ನಮಗೆ ಯಾವುದೇ ತೊಂದರೆಯಾಗಿಲ್ಲ.

ಆರೋಗ್ಯಾಧಿಕಾರಿ, ಡಿಸಿ, ಪೊಲೀಸ್ ಅಧಿಕಾರಿಗಳು ನಮಗೆ ಸಾಕಷ್ಟು ಸಹಕಾರ ನೀಡಿದ್ದಾರೆ. ಬಹಳ ಉತ್ತಮವಾಗಿ ನಮಗೆ ಚಿಕಿತ್ಸೆ ನೀಡಿದ್ದಾರೆ. ಸರಕಾರವೂ ನಮ್ಮನ್ನು ಉತ್ತಮವಾಗಿ ನೋಡಿಕೊಂಡಿದ್ದು, ಸೌಲಭ್ಯಗಳನ್ನೂ ಒದಗಿಸಿದೆ.

ಕರೋನಾ ಸೊಂಕಿನಿಂದ ಗುಣಮುಖನಾಗಿ ಇಂದು ಬಿಡುಗಡೆಯಾದ ವ್ಯಕ್ತಿ.

ನಮ್ಮ ಬಟ್ಟೆಯಲ್ಲೇ ಕಾರವಾರದ ಪತಂಜಲಿ ತೆರಳಿದ್ವಿ, ಬರುವಾಗ ಅವರ ಬಟ್ಟೆ ಹಾಕಿಕೊಂಡು ಬಂದಿದ್ದೆವು. ಅವರೇ ಚಪ್ಪಲಿಯನ್ನೂ ಕೊಟ್ಟಿದ್ರು, ಮಹಿಳೆಯರಿಗೂ ಬಟ್ಟೆ ನೀಡಿದ್ದಾರೆ
ವೈದ್ಯಾಧಿಕಾರಿಗಳು ನಮ್ಮಲ್ಲಿ ಬಹಳಷ್ಟು ಚೆನ್ನಾಗಿದ್ರು, ಉತ್ತಮ ಚಿಕಿತ್ಸೆ ನೀಡಿದ್ರು. ನಮಗಾಗಿ ವೈದ್ಯಾಧಿಕಾರಿಗಳು ದೇವರಲ್ಲಿ ಪ್ರಾರ್ಥನೆ ಕೂಡಾ ಮಾಡಿದ್ದಾರೆ.

ಕೊರೋನಾ ದಿಂದ ಗುಣಮುಖರಾದ ಭಟ್ಕಳ ಮೂಲದ ವ್ಯಕ್ತಿ.

ಅತ್ಯುತ್ತಮವಾಗಿ ನಮ್ಮ ಜತೆ ಬೆರೆತುಕೊಂಡು ಗುಣಮುಖಗೊಳಿಸಿದರು ಎಂದು
ಡಿಸ್ಟಾರ್ಚ್‌ಗೊಂಡ ಸೋಂಕಿತ‌ ಸಂಖ್ಯೆ 98 ಹಾಗೂ ಸೋಂಕಿತ 36 ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಸೊಂಕಿತ ವ್ಯಕ್ತಿಗಳು ಚೇತರಿಸಿಕೊಳ್ಳುವ ಮೂಲಕ ಆಸ್ಪತ್ರೆಯಿಂದ ಬಿಡುಗಡೆ ಗೊಂಡರು‌.ಅವರು ಏನು ಹೇಳಿದರು ಎನ್ನುವ ಮಾತುಗಳು ಇಲ್ಲಿದೆ. ವಿಡಿಯೋ ನೋಡಿ.#covid-19 #uttarakannada

Posted by Kannadavani on Saturday, 18 April 2020

ಇಂದು ಕಾರವಾರದ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಸೋಂಕಿತ ರೋಗಿ ಸಂಖ್ಯೆ 98, ಭಟ್ಕಳದ 26 ವರ್ಷದ ಯವಕನಾಗಿದ್ದು, ದುಬೈನಿಂದ ಮಾರ್ಚ್ 20 ರಂದು ಭಟ್ಕಳಕ್ಕೆ ಆಗಮಿಸಿದ್ದ.

ದುಬೈನಿಂದ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರವಾರದ ಮೂಲಕ ಭಟ್ಕಳಕ್ಕೆ ತೆರಳಿದ್ದ ಯುವಕನಲ್ಲಿ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ನಡೆಸಿದ ಪರೀಕ್ಷೆಯಲ್ಲಿ ಸೊಂಕು ಪತ್ತೆಯಾಗಿತ್ತು.

ಅಲ್ಲದೇ, ಈ ಯುವಕನಲ್ಲಿ ಸೋಂಕು ಪತ್ತೆಯಾಗುವ ಮುನ್ನ ಮೂರು ದಿನಗಳ ಹಿಂದೆ ಆತನ ಸಹೋದರನಲ್ಲೂ ಸೊಂಕು ಪತ್ತೆಯಾಗಿತ್ತು. ಈ ಯುವಕನಲ್ಲಿ
ಸೋಂಕು ದೃಢಪಟ್ಟ ಬಳಿಕ ಯುವಕನನ್ನು ಮಾರ್ಚ್ 31ರಂದು ಕಾರವಾರದ ನೌಕಾ ನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 19 ದಿನಗಳ ಬಳಿಕ ಕೊರೋನಾ ವೈರಸ್ ಕಾಟದಿಂದ ಯುವಕ ಗುಣಮುಖನಾಗಿದ್ದಾನೆ. ಇನ್ನು ಈ ಹಿಂದೆಯೇ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದ ಸೋಂಕಿತ ಸಂಖ್ಯೆ 36 ದುಬೈನಿಂದ ಮಾ.19ಕ್ಕೆ ಮುಂಬೈಗೆ ತಲುಪಿದ್ರು. ರೈಲಿನ ಮೂಲಕ ಮಾ. 20ಕ್ಕೆ
ಭಟ್ಕಳಕ್ಕೆ ಬಂದಿದ್ದ 65 ವರ್ಷದ ಸೋಂಕಿತ ಸಂಖ್ಯೆ 36ರಿಗೆ, ಸೋಂಕು ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾ. 21ರಂದೇ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಪರೀಕ್ಷೆ ವರದಿಯಲ್ಲೂ ಕೊರೊನಾ ಸೋಂಕು ಪತ್ತೆಯಾಗಿತ್ತು. ಚಿಕಿತ್ಸೆ ಬಳಿಕ‌ ಈ ಹಿಂದೆಯೇ ಪತಂಜಲಿ ಆಸ್ಪತ್ರೆಯಿಂದ ಸೋಂಕಿತ ಸಂಖ್ಯೆ 36 ಬಿಡುಗಡೆಯಾಗಿದ್ರು.

ಕ್ಯಾಪ್ಟನ್ಸ್ ಗಳ ಶ್ರಮ-ಉತ್ತರ ಕನ್ನಡ ಜಿಲ್ಲೆಯಲ್ಲಿರುವಕೊರೋನಾ ಸೊಂಕಿತರ ಸಂಖ್ಯೆ ಇಳಿಮುಖ

ಉತ್ತರ ಕನ್ನಡ ಜಿಲ್ಲೆಯ ಒಂಬತ್ತನೇ ಕೊರೋನಾ ಸೊಂಕಿತ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದೆ. ಇಂದು ಸೊಂಕಿತ ಸಂಖ್ಯೆ 98 ಕಾರವಾರದವನೌಕಾ ನೆಲೆಯ ಪತಾಂಜಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.
ಭಟ್ಕಳದ 26 ವರ್ಷದ ಯವಕ ದುಬೈ ನಿಂದ ಮಾರ್ಚ 20 ರಂದು ಭಟ್ಕಳಕ್ಕೆ ಆಗಮಿಸಿದ್ದ.
ದುಬೈ ನಿಂದ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರವಾರದ ಮೂಲಕ ಭಟ್ಕಳಕ್ಕೆ ತರಳಿದ್ದ ಯುವಕನಲ್ಲಿ ಸೊಂಕು ಪತ್ತೆಯಾಗಿತ್ತು.

ಚಿಕಿತ್ಸೆ ನೀಡುತ್ತಿರುವ ವೈದ್ಯರು.


ಯುವಕನಲ್ಲಿ ಸೊಂಕು ಪತ್ತೆಯಾಗುವ ಮುನ್ನ ಮೂರು ದಿನಗಳ ಹಿಂದೆ ಆತನ ಸಹೋದರನಲ್ಲೂ ಸೊಂಕು ಪತ್ತೆಯಾಗಿತ್ತು.ಸೊಂಕು ದೃಡಪಟ್ಟ ಬಳಿಕ ಯುವಕನನ್ನು ಮಾರ್ಚ 31 ರಂದು ಕಾರವಾರದ ನೌಕಾ ನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.19 ದಿನಗಳ ಚಿಕಿತ್ಸೆ ಬಳಿಕ ಕೊರೋನಾ ವೈರೆಸ್ ನಿಂದ ಈತ ಸಂಪೂರ್ಣ ಗುಣಮುಖನಾಗಿದ್ದು ಇಂದು ಪತಂಜಲಿ ಆಸ್ಪತ್ರೆಯಿಂದ ಬಿಡುಗಡೆ ಯಾಗುವ ಮೂಲಕ ಒಟ್ಟು 9 ಜನ ಕೊರೋನಾ ಸೊಂಕಿತರು ಜಿಲ್ಲೆಯಲ್ಲಿ ಬಿಡುಗಡೆಯಾಗಿದ್ದು ಉಡುಪಿಯ ಮಣಿಪಾಲ್ ನಲ್ಲಿ ಇರುವ ಗರ್ಭಿಣಿ ಮಹಿಳೆ ಹಾಗೂ ಪತಂಜಲಿ ಆಸ್ಪತ್ರೆಯಲ್ಲಿರುವ ಆಕೆಯ ಪತಿಗೆ ಚಿಕಿತ್ಸೆ ಮುಂದುವರೆದಿದ್ದು 11 ಜನ ಸೊಂಕಿತರಲ್ಲಿ ಸದ್ಯ ಕರೋನಾ ಸೊಂಕಿತರು ಇಬ್ಬರು ಮಾತ್ರ ಇದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಇಳಿಮುಖವಾಗಿದೆ.

ಡಿ.ಹೆಚ್.ಓ .ಆಶೋಕ್ ಕುಮಾರ್.

ಇವರಲ್ಲದಕ್ಕೂ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ,ಸಿ.ಇ.ಓ ಆರ್.ರೋಷನ್ ,ಎಸ್.ಪಿ ಶಿವಪ್ರಕಾಶ್ ದೇವರಾಜ್ ರವರ ತಂಡದ ಶ್ರಮದ ಫಲ ಇಂದು ಸೊಂಕು ಸಮುದಾಯಕ್ಕೆ ಹಬ್ಬದೇ ವ್ಯಕ್ತಿಗಳಲ್ಲೇ ಉಳಿದು ಎಲ್ಲರೂ ಗುಣಮುಖರಾಗುವಂತೆ ಮಾಡಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ