BREAKING NEWS
Search

ಟೋಲ್ ಶುಲ್ಕ ಸ್ಥಳೀಯರಿಗೆ ವಿನಾಯ್ತಿ ನೀಡದಿದ್ದರೆ ಕೋರ್ಟ ನಲ್ಲಿ ದಾವೆ- ಸತೀಶ್ ಸೈಲ್ .

741

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಐ.ಆರ್.ಬಿ ಕಂಪನಿ ಚತುಷ್ಪತ ರಸ್ತೆ ಕಾಮಗಾರಿ ಅಪೂರ್ಣ ವಾಗಿರುವಾಗಲೇ ಟೋಲ್ ನಿರ್ಮಾಣ ಮಾಡಿ ಸ್ಥಳೀಯರಿಗೆ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಕಾರವಾರದ ಮಾಜಿ ಶಾಸಕ ಸತೀಶ್ ಸೈಲ್ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂದು ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು ನಿನ್ನೆದಿನ ಐ.ಆರ್.ಬಿ ಕಂಪನಿ ಅಧಿಕಾರಿಗಳೊಂದಿಗೆ ಮೀಟಿಂಗ್ ಮಾಡಿದ್ದೇನೆ.ಸ್ಥಳೀಯರಿಗೆ ಶುಲ್ಕ ವಸೂಲಿ ಮಾಡುತ್ತಿರುವುದು ತಪ್ಪು .

ಮಾಜಾಳಿಯಿಂದ ಅಂಕೋಲದ ವರೆಗೆ ಶೇಕಡ 50 ರಷ್ಟು ಕಾಮಗಾರಿ ಪೂರ್ಣವಾಗಿಲ್ಲ ಆದರೂ ಅಂಕೋಲದ ಬೇಲಿಕೇರಿ ಬಳಿ ಶುಲ್ಕ ವಸೂಲಿ ಮಾಡುತಿದ್ದಾರೆ,ಅರಗ,ಅಮದಳ್ಳಿ,ಚಂಡಯಾ,ಹಟ್ಟಿಕೇರಿ ಬಿಡ್ಜ್ ಗಳು ,ರಸ್ತೆಗಳೇ ಆಗಿಲ್ಲ, ಹೀಗಿರುವಾಗ ಹೇಗೆ ಶುಲ್ಕ ವಸೂಲಿ ಮಾಡುತ್ತಾರೆ.ಕರಾವಳಿ ಭಾಗದಲ್ಲಿನ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಲೇ ಬೇಕು ಈ ಹಿಂದೆ ಮಾಜಾಳಿ ನಂತರ ಗೋವಾ ಗಡಿಯಲ್ಲಿ ಗೋವಾ ಸರ್ಕಾರದ ಟೋಲ್ ಗೆ ಕಾರವಾರದ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಬೇಕೆಂದು ಗೋವಾದ ಅಂದಿನ ಮುಖ್ಯಮಂತ್ರಿ ಪಾಲೇಕರ್ ರವರಿಗೆ ನಾನು ಶಾಸಕನಾಗಿದ್ದಾಗ ವಿನಾಯ್ತಿ ನೀಡಬೇಕೆಂದು ಕೇಳಿದ್ದೆ ಆಗ ಕಾರವಾರದ ವಾಹನಗಳಿಗೆ ವಿನಾಯ್ತಿ ನೀಡಿದ್ದರು.

ಆದರೇ ನಮ್ಮಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯ್ತಿ ನೀಡಿಲ್ಲ, ಕೇಳಿದರೆ ವೈಟ್ ಬೋರ್ಡ ಗೆ ಮಾತ್ರ ನೀಡುತ್ತೇವೆ ಎಂದು ಕಂಪನಿಯವರು ಹೇಳುತ್ತಾರೆ.ಇದು ತಪ್ಪು ಎಲ್ಲಾ ವಾಹನಗಳಿಗೆ ವಿನಾಯ್ತಿ ನೀಡಬೇಕು,ಕಾಮಗಾರಿ ಪೂರ್ಣವಾಗದೇ ಶುಲ್ಕ ವಸೂಲಿ ಮಾಡುತಿದ್ದಾರೆ. ನಾನು ಮಾಜಾಳಿಯಿಂದ ಅಂಕೋಲದ ವರೆಗೆ ರಸ್ತೆ ಸರ್ವೆ ಮಾಡಿಸಿ ಐ.ಆರ್.ಬಿ ಕಂಪನಿ ವಿರುದ್ಧ ಕೋರ್ಟ ನಲ್ಲಿ ದಾವೆ ಹೂಡುತ್ತೇನೆ. ಹತ್ತು ದಿನ ಸಮಯ ಕೇಳಿದ್ದಾರೆ ತೆಗೆದುಕೊಳ್ಳಲಿ ಆದರೇ ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯ್ತಿ ನೀಡಲೇ ಬೇಕು ಎಂದರು.

ಕೆ.ಎಸ್ .ಆರ್ .ಟಿ.ಸಿ ಗೆ ಟೋಲ್ ಶುಲ್ಕ-ಪ್ರಯಾಣಿಕರಿಗೆ ಹೊರೆ ತಪ್ಪಲಿ-ಸೈಲ್

ಕಾರವಾರದಿಂದ ಅಂಕೋಲಕ್ಕೆ ಹೋಗುವ ಸ್ಥಳೀಯ ಸರ್ಕಾರಿ ಬಸ್ ಗಳಿಗೆ ಟೋಲ್ ಶುಲ್ಕದಿಂದಾಗಿ ಪ್ರಯಾಣಿಕರ ಮೇಲೆ ಹೆಚ್ಚಿನ ದರ ವಿಧಿಸಲಾಗುತ್ತಿದೆ.

ಮೂರು ಕಡೆ ಟೋಲ್ ಗಳಿದ್ದು ಕೆ.ಎಸ್.ಆರ್.ಟಿ.ಸಿ ಯ ಬಸ್ ಗೆ ಕ್ರಮವಾಗಿ 9ರೂ, ಸ್ಲೀಪರ್ ಗೆ 13ರೂ ,ರಾಜಹಂಸಕ್ಕೆ 10 ರೂ ಏರಿಸಲಾಗಿದೆ.ಲೋಕಲ್ ಬಸ್ ಗೆ ವಿನಾಯ್ತಿ ನೀಡಬೇಕು ಇದರಿಂದ ಸ್ಥಳೀಯ ಪ್ರಯಾಣಿಕರಿಗೆ ಹೊರೆ ತಪ್ಪುತ್ತದೆ.
ಪ್ರತಿ ಟ್ರಿಪ್ ಗೆ ಟೋಲ್ ಶುಲ್ಕ ತೆಗೆದುಕೊಳ್ಳುವುದನ್ನು ಬಿಡಬೇಕು, 24 ಘಂಟೆ ಗೆ ತೆಗೆದುಕೊಳ್ಳಬೇಕು. ಐ.ಆರ್ .ಬಿ ಕಂಪನಿ ರಸ್ತೆಯಲ್ಲಿ ದರೋಡೆಗೆ ಮಾಡುತಿದ್ದಾರೆ ಇದು ಸರಿಯಲ್ಲ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

ಅಪಘಾತ ತಪ್ಪಿಸಲು ಬೀದಿ ದೀಪ ಆಲವಡಿಸಿ!

ಮಾಜಾಳಿಯಿಂದ ಅಂಕೋಲ ಭಾಗದಲ್ಲಿ ಅಲ್ಲಲ್ಲಿ ಬೀದಿ ದೀಪವನ್ನು ರಸ್ತೆಯಲ್ಲಿ ಅಳವಡಿಸಲಾಗಿದೆ.ಆದರೇ ಎಲ್ಲಿ ಅವಷ್ಯಕತೆ ಇದೆಯೋ ಅಲ್ಲಿ ಅಳವಡಿಸಿಲ್ಲ ,ರಸ್ತೆ ತಿರುವು ,ಗ್ರಾಮಗಳು ಇರುವ ಪ್ರದೇಶಕ್ಕೆ ಕಡ್ಡಾಯವಾಗಿ ಅಳವಡಿಸಬೇಕು.ರಸ್ತೆಯನ್ನು ಸಹ ಸಮರ್ಪಕವಾಗಿ ಮಾಡದೇ ಅಪಘಾತವಾಗಿ ಜನರು ಸಾಯುವಂತಾಗಿದೆ ಎಂದು ಐ.ಆರ್.ಬಿ ಕಂಪನಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

ಶಾಸಕರು ಗುದ್ದಲಿ ಹಿಂದೆಮುಂದೆ ಮಾಡುವುದನ್ನು ಬಿಡಲಿ!


ಕಾರವಾರದ ಶಾಸಕಿ ರೂಪಾಲಿ ನಾಯ್ಕ ರವರು ಎಲ್ಲವೂ ನನ್ನ ಕಾಲದಲ್ಲಿಯೇ ಆಗಿದ್ದು ಎಂದು ಗೂಬೆ ಕೂರಿಸುತ್ತಾರೆ,ಆದರೇ ನನ್ನ ಕಾಲದಲ್ಲಿ ಮಂಜೂರಾದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿ ತನ್ನ ಅವದಿಯದ್ದು ಎನ್ನುತ್ತಾರೆ, ವಿವಾದ ,ಸಮಸ್ಯೆ ಬಂದಾಗ ಗುದ್ದಲಿಯನ್ನು ತಿರುಗಿಸಿ ನನ್ನವಳಿ ತೋರಿಸಿ ನನ್ನಕಾಲದ್ದು ಎನ್ನುತ್ತಾರೆ .ಈ ರೀತಿ ಹೇಳುವುದನ್ನು ಬಿಡಲಿ ಎಂದು ಶಾಸಕಿ ರೂಪಾಲಿನಾಯ್ಕ ರವರಿಗೆ ಟಾಂಗ್ ನೀಡಿದರು.
Leave a Reply

Your email address will not be published. Required fields are marked *