BREAKING NEWS
Search

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹದಿಂದ ₹700ಕೋಟಿಗೂ ಹಾನಿ-ಸಚಿವ ಹೆಬ್ಬಾರ್ ಹೇಳಿಕೆ ವಿಡಿಯೊ ನೋಡಿ.

439

ಕಾರವಾರ: ಈ ವರ್ಷ ಜಿಲ್ಲೆಯಲ್ಲಿ ನೆರೆಯಿಂದ ₹700 ಕೋಟಿಗೂ ಅಧಿಕ ಹಾನಿಯಾಗಿದೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದುಕೊಳ್ಳಲು ಅಗತ್ಯ ಕ್ರಮಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾರ್ಮಿಕ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.
ನೆರೆ ಮತ್ತು ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ನಗರದಲ್ಲಿ ಶನಿವಾರ ಮಾಹಿತಿ ಪಡೆದುಕೊಂಡ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಕಳಚೆ, ಅಣಶಿ, ಭಾಶಿ ಮುಂತಾದ ಕಡೆಗಳಲ್ಲಿ ಊಹೆಗೂ ಮೀರಿದ ಹಾನಿಯಾಗಿದೆ. ಇದನ್ನು ಸಮೀಕ್ಷೆ ಮಾಡಲು ಕೇಂದ್ರದಿಂದಲೂ ಒಂದು ತಂಡ ಜಿಲ್ಲೆಗೆ ಭೇಟಿ ನೀಡಲಿದೆ. ಅಲ್ಲದೇ ಈ ರೀತಿ ಆಗಲು ನಿಖರವಾದ ಕಾರಣಗಳೇನು ಎಂದು ತಿಳಿದುಕೊಳ್ಳಲು ತಜ್ಞರ ತಂಡವನ್ನು ಕರೆಸಲಾಗುತ್ತಿದೆ. ಅವರು ನೀಡುವ ಪ್ರಾಥಮಿಕ ವರದಿಯನ್ನು ಆಧರಿಸಿ ಶಾಶ್ವತ ಪರಿಹಾರ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು.
ಜಿಲ್ಲೆಯ ಪ್ರವಾಹ ಸಂಬಂಧ ಉಸ್ತುವಾರಿ ಸಚಿವರು ಹೇಳಿದ ಮಾತುಗಳೇನು ಸಂಪೂರ್ಣ ವಿವರ ವಿಡಿಯೊ ನೋಡಿ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ