BREAKING NEWS
Search

ಶನಿವಾರ ಶಾಲೆಗೆರಜೆ:ಅಧಿಕಾರಿಗಳ ರಜೆಗೆ ಕತ್ತರಿ!ಪ್ರವಾಹದ ಸ್ಥಿತಿ ತಹಬದಿಗೆ!

1659

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶನಿವಾರ ಕೂಡ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ.

ಅಧಿಕಾರಿಗಳಿಗೆ ರಜೆಗೆ ಕತ್ತರಿ!

ಪರಿಹಾರ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಎಲ್ಲ ಅಧಿಕಾರಿಗಳೂ ಮುಂದಿನ ಮೂರು ದಿನಗಳ ರಜೆ ಅವಧಿಯಲ್ಲಿ ಕೇಂದ್ರಸ್ಥಾನ ಬಿಡದಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಿರುವ ಹಿನ್ನೆಲೆಯಲ್ಲಿ ಗಂಜೀಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ಥರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಹಾನಿಯ ಅಂದಾಜು ಮಾಡಲಾಗುತ್ತಿದೆ. ಪರಿಹಾರ ಕ್ರಮಗಳನ್ನು ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ನಿಯೋಜಿತ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಸಂತ್ರಸ್ಥರಿಗೆ ನೆರವಾಗಬೇಕು ಎಂದು ಅವರು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ಭಾಗಗಲ್ಲಿ ಪ್ರವಾಹ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಕ್ಷಣ ಪರಿಹಾರ ಕ್ರಮಕೈಗೊಂಡ ಹಿನ್ನೆಲೆಯಲ್ಲಿ ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿ.

ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಗೊಡಬಾರದು ಎಂದ ಅವರು
ಈಗಾಗಲೆ ಎನ್ ಡಿ ಆರ್ ಎಫ್ ಒಂದು ತಂಡ ಸಂಜೆ ವೇಳೆಗೆ ಜಿಲ್ಲೆ ಆಗಮಿಸಲಿದೆ. ಗಂಜಿಕೇಂದ್ರಗಳನ್ನು ತೆರೆಯಲಾಗಿದೆ. ರಸ್ತೆ ಸಂಪರ್ಕ ಇಲ್ಲದ ಪ್ರದೇಶಗಳಿಗೆ ನೌಕಾಸೇನೆಯ ಹೆಲಿಕಾಪ್ಟರ್ ಮೂಲಕ ಸಂತ್ರಸ್ಥರಿಗೆ ಆಹಾರ, ಔಷಧ, ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಸಂತ್ರಸ್ಥರ ರಕ್ಷಣೆಗೆ ಜಿಲ್ಲಾಡಳಿತ ಬದ್ದವಿದೆ ಎಂದು ಅವರು ತಿಳಿಸಿದ್ದಾರೆ.
Leave a Reply

Your email address will not be published. Required fields are marked *