BREAKING NEWS
Search

ಶಿರಸಿ ಪೋಲೀಸರಿಂದ ಭರ್ಜರಿ ಬೇಟೆ:ಈ ಕಳ್ಳರು ಕದ್ದಿದ್ದೇನು ಗೊತ್ತಾ!

3239

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಳವು ಪ್ರಕಣಗಳಲ್ಲಿ ಭಾಗಿಯಾಗಿದ್ದ ೬ ಆರೋಪಿಗಳನ್ನು ಶಿರಸಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 15 ಕೆ.ಜಿ. ಪಂಚಲೋಹ ವಿಗ್ರಹ ಸೇರಿ 10 ಲಕ್ಷಕ್ಕೂ ಅಧಿಕ ಮೊತ್ತದ ಬಂಗಾರ, ಬೆಳ್ಳಿ ಆಭರಣಗಳು, ವಾಹನಗಳು ಹಾಗೂ ಕಳ್ಳತನಕ್ಕೆ ಬಳಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಶಿರಸಿ ತಾಲೂಕಿನ ಕಲಗಾರಿನ ಮುನ್ನಾ ದಾವುದ್ ಸಾಬ (೩೨), ಬದನಗೋಡಿನ ಸಂತೋಷ ಬೋವಿವಡ್ಡರ್ (22), ಗಡಳ್ಳಿ ಕ್ರಾಸಿನ ಮಹಮ್ಮದ್ ಶರೀಫ್ ಅಬ್ದುಲ್ ಖುದ್ದುಸ್ (೪೭), ಬನವಾಸಿಯ ಲಕ್ಷ್ಮೀಕಾಂತ ನಿರಂಜನ ಒಡೆಯರ್ (೩೦), ಹಾಡಲಗಿಯ ಮಂಜುನಾಥ ಕೊರವರ ಹಾಗೂ ಚಿಕ್ಕಬಳ್ಳಾಪುರದ ಗಾಂಧಿನಗರ ಚಿಂತಾಮಣಿಯ ಇಮ್ರಾನ್ ಪಾಶಾ ರಶೂಲ್ ಸಾಬ್ ಇವರನ್ನು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡ ಬೆಲೆಬಾಳುವ ವಸ್ತುಗಳು

ಆರೋಪಿಗಳಿಂದ 5ಲಕ್ಷ ಬೆಲೆಬಾಳುವ ನಿಧಿ ಶೋಧನೆಗಾಗಿ ಬಳಸುವ ಮೆಟಲ್ ಡಿಕ್ಟೇಟರ್, 25ಕೆ.ಜಿ
ಪಂಚ ಲೋಹದ ವಿಗ್ರಹ, 6.5 ಲಕ್ಷ ರೂ. ಬೆಲೆ ಬಾಳುವ ಚಿನ್ನದ ಆಭರಣ ಹಾಗೂ 9೦ ಸಾವಿರ ರೂ. ಮೌಲ್ಯದ ಬೆಳ್ಳಿ ಸಾಮಾನುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೃತ್ಯಕ್ಕೆ ಬಳಸಿದ ಮೂರು ಬೈಕ್ ಹಾಗೂ ಒಂದು ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಅಕ್ಟೋಬರ್ ನಲ್ಲಿ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯ ಶಿಗೇಹಳ್ಳಿಯ ಒಂಟಿ ಮನೆಯ ಸಾವಿತ್ರಿ ಎಂಬ ಮಹಿಳೆಯ ಮೇಲಿನ ಹಲ್ಲೆ ಹಾಗೂ ಕಳ್ಳತನ, ಬನವಾಸಿ ಠಾಣಾ ವ್ಯಾಪ್ತಿಯ ಹಾಡಲಗಿಯಲ್ಲಿ ನಡೆದ ಕಳ್ಳತನ, ಅಜ್ಜರಣಿ ದೇವಸ್ಥಾನ ಕಳ್ಳತನದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೇ ಶಿರಸಿ ಹಾಗೂ ಬನವಾಸಿ ಸುತ್ತಮುತ್ತ ನಿಧಿಗಾಗಿ ಅನೇಕ ದೇವಸ್ಥಾನದಲ್ಲಿ ಶೋಧನೆ ನಡೆಸಿದ್ದು, ಈ ಸಂಬಂಧ ಬನವಾಸಿಯ ಬ್ಯಾಗದ್ದೆಯ ಶ್ರೀ ಶಂಕರನಾರಾಯಣ ದೇವಸ್ಥಾನ, ಕಪ್ಪಗುಡ್ಡೆಯ ಈಶ್ವರ ದೇವಸ್ಥಾನ ಹಾಗೂ ಶಿರಸಿ ಗ್ರಾಮಾಂತರ ಪ್ರದೇಶದ ವಾಣಿ ವಿಘ್ನೇಶ್ವರ ದೇವಸ್ಥಾನ ಹಾಗೂ ಕೆ.ಎಚ್.ಬಿ.ಕಾಲೋನಿಯ ಸಿದ್ಧಿ ವಿನಾಯಕ ದೇವಸ್ಥಾನ ಕಳವು ಮಾಡಿದ್ದು, ಬನವಾಸಿ ಮಧುಕೇಶ್ವರ ದೇವಸ್ಥಾನದ ಒಳಗಡೆಯಿಂದ ಭಾರೀ ಗಾತ್ರದ ಗಂದದ ಮರವನ್ನು ಕಳವು ಮಾಡಿಕೊಂಡು ಹೋಗಿದ್ದರು.




One thought on “ಶಿರಸಿ ಪೋಲೀಸರಿಂದ ಭರ್ಜರಿ ಬೇಟೆ:ಈ ಕಳ್ಳರು ಕದ್ದಿದ್ದೇನು ಗೊತ್ತಾ!

Leave a Reply

Your email address will not be published. Required fields are marked *