BREAKING NEWS
Search

add

ಉತ್ತರ ಕನ್ನಡ ದಲ್ಲಿ ಇಂದು 26 ಕರೋನಾ ಪಾಸಿಟಿವ್ 72 ಜನ ಗುಣಮುಖ

1731

ಕಾರವಾರ: ಉತ್ತರ ಕನ್ನಡ‌ ಜಿಲ್ಲೆಯಲ್ಲಿ ಇಂದು 26 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಂದಿನ ತಾಲೂಕುವಾರು ವಿವರ:-

ಕಾರವಾರದಲ್ಲಿ 6, ಅಂಕೋಲಾದಲ್ಲಿ 4, ಯಲ್ಲಾಪುರ, ಮುಂಡಗೋಡದಲ್ಲಿ ತಲಾ 5, ಭಟ್ಕಳದಲ್ಲಿ 4, ಸಿದ್ದಾಪುರದಲ್ಲಿ 1, ಹಳಿಯಾಳದಲ್ಲಿ ಓರ್ವನಲ್ಲಿ ಸೋಂಕು ದೃಢಪಟ್ಟಿದೆ.

ಕಾರವಾರದಲ್ಲಿ 9, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರದಲ್ಲಿ ತಲಾ ಒಂದು, ಶಿರಸಿಯಲ್ಲಿ 16, ಹಳಿಯಾಳದಲ್ಲಿ 43 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ಈವರೆಗೆ ಜಿಲ್ಲೆಯ 2,196 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,490 ಮಂದಿ ಗುಣಮುಖರಾಗಿದ್ದಾರೆ. 24 ಮಂದಿ ಸಾವನ್ನಪ್ಪಿದ್ದು, 682 ಸಕ್ರಿಯ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದ್ದು 90 ಸೋಂಕಿತರು ಹೋಮ್ ಐಸೋಲೆಶನ್ ನಲ್ಲಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ