BREAKING NEWS
Search

ಉತ್ತರ ಕನ್ನಡ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳ ಪಕ್ಷಿನೋಟ.

240

TMS ಅಧ್ಯಕ್ಷ ಸ್ಥಾನಕ್ಕೆ ಅಗ್ಗಾಶಿಕುಂಬ್ರಿ, ಉಪಾಧ್ಯಕ್ಷರಾಗಿ ನರಸಿಂಹ ಕೋಣೆಮನೆ ಆಯ್ಕೆ

ಯಲ್ಲಾಪುರ: ಇಲ್ಲಿನ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ ಪುನಃ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನರಸಿಂಹ ಕೋಣೆಮನೆ ಆಯ್ಕೆಯಾಗಿದ್ದಾರೆ. ಬುಧವಾರ ಸಂಜೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು.
ನಂತರ ನಡೆದ ಪದಗ್ರಹಣ ಸಮಾರಂಭದಲ್ಲಿ ಗೆಲುವು ಸಾಧಿಸಿದ ತಂಡಕ್ಕೂ, ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ ವಿವಿಧ ಸಹಕಾರಿ ಸಂಘಗಳಪ್ರಮುಖರು ಹಾಗೂ ವಿವಿಧ ರೈತ ಮುಖಂಡರು ಹಾರ ಹಾಕಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎನ್. ಕೆ. ಭಟ್ಟ ಅವರು, ಹಿಂದಿನ ಅವಧಿಯಲ್ಲಿ ರೈತಪರ ಕಾರ್ಯಗಳನ್ನು ಕೈಗೊಂಡ ಫಲವಾಗಿ ಸದಸ್ಯರು ಮತ್ತೆ ಆಶೀರ್ವದಿಸಿದ್ದಾರೆ. ಎಲ್ಲರೂ ಒಟ್ಟಾಗಿ ಸಂಘದ ಬೆಳವಣಿಗೆ ಹಾಗೂ ರೈತರಿಗೆ ಅನುಕೂಲವಾಗುವ ಕಾರ್ಯಗಳನ್ನು ಮಾಡುವತ್ತ ಶ್ರಮವಹಿಸುತ್ತೇವೆ ಎಂದರು.
ನೂತನ ಪದಾಧಿಕಾರಿಗಳಿಗೆ ಶುಭಕೋರಿ ಹಿರಿಯರಾದ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಅಡಕೆ ವರ್ತಕರ ಸಂಘದ ಅಧ್ಯಕ್ಷ ಎಂ.ಆರ್ ಹೆಗಡೆ ಕುಂಬ್ರಿಗುಡ್ಡೆ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಲ್.ಪಿ ಭಟ್ಟ ಗುಂಡ್ಕಲ್, ಎಲ್.ಎಸ್.ಎಂ.ಪಿ ಸೊಸೈಟಿ ಉಪಾಧ್ಯಕ್ಷ ಟಿ.ಆರ್.ಹೆಗಡೆ ಮಾತನಾಡಿದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿ ಮಂಡಳಿಗೆ ಆಯ್ಕೆಯಾದ ನಿರ್ದೇಶಕರು, ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು, ರೈತರು ಭಾಗವಹಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯಲ್ಲಿನ ಇಂದಿನ ಕರೋನಾ ಪಾಸಿಟಿವ್ ವಿವರ ಈಕೆಳಗಿನಂತಿದೆ.

ಪೊಲೀಸ್ ಹುತಾತ್ಮರ ದಿನಾಚರಣೆ: ಹುತಾತ್ಮರ ಸ್ಮಾರಕಕ್ಕೆ ಪುಷ್ಪರ್ಪಣೆ ಮೂಲಕ ಗೌರವ ನಮನ.

ಕಾರವಾರ ಅ.21(ಕರ್ನಾಟಕ ವಾರ್ತೆ )ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಪೊಲೀಸ್ ಹುತಾತ್ಮರ ದಿನದ ಅಂಗವಾಗಿ ಜಿಲ್ಲಾ ನ್ಯಾಯಾಧೀಶೆ ವಿಪುಲಾ ಎಂ. ಬಿ. ಪೂಜಾರ ಅವರು ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛವಿಟ್ಟು ಗೌರವ ಸಲ್ಲಿಸಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪೊಲೀಸ್ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಇದೆ ಸಂದರ್ಭದಲ್ಲಿ ಕಮಾಂಡೋರವರಿಂದ ಶಸ್ತ್ರ ಕವಾಯತು ನಡೆಸಿ, ಎರಡು ನಿಮಿಷಗಳ ಕಾಲ ಮೌನ ಆಚರಿಸಿ ಮೂರು ಸುತ್ತು ಗುಂಡು ಹಾರಿಸುವದರೊಂದಿಗೆ ರಾಷ್ಟ್ರಗೀತೆ ಹಾಡಿ ಗೌರವ ಸಲ್ಲಿಸಲಾಯಿತು
ಸಂಜೆ ರವೀಂದ್ರನಾಥ ಟ್ಯಾಗೋರ ಕಡಲ ತೀರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಬ್ಯಾಂಡ್ ಸಿಬ್ಬಂದಿಯವರಿಂದ ಬ್ಯಾಂಡ್ ಶೋ ಪ್ರದರ್ಶನ ನೀಡಿ ಪೊಲೀಸ್ ಹುತಾತ್ಮರಿಗೆ ಗೌರವ ನೀಡಿದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ