ಪರೀಕ್ಷೆಯಲ್ಲಿ ಫೇಲ್:ಕಿನ್ನತೆಗೊಳಗಾದ ವಿದ್ಯಾರ್ಥಿ ಆತ್ಮಹತ್ಯೆ

28


ಕಾರವಾರ :- ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ನಾಗಿದ್ದಕ್ಕೆ ಕಿನ್ನತೆಗೊಳಗಾದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.
ಹರ್ಷಿತ ನಾಗರಾಜ ನಾಯ್ಕ(17) ಮೃತ ದುರ್ದೈವಿಯಾಗಿದ್ದಾನೆ. ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ಈತ ಫೇಲ್ ಆಗಿದ್ದ.ಹೀಗಾಗಿ ಕಿನ್ನತೆಗೊಳಗಾಗಿದ್ದು ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ