add

ಅಂಕೋಲದ ಮನೆಯೊಂದಕ್ಕೆ ನುಗ್ಗಿದ ಚಿರತೆ ಮಾಡ್ತು ಕಿತಾಪತಿ!

2536

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿರತೆಗಳಿಗೇನು ಕಮ್ಮಿ ಇಲ್ಲ. ಆದ್ರೆ ಆಹಾರದ ಕೊರತೆ ಚಿರತೆಗಳು ನಾಡಿಗೆ ನುಗ್ಗುವುದು ಸಾಮಾನ್ಯವಾಗಿದೆ. ಹೀಗಾಗಿ ರಾತ್ರಿ ವೇಳೆ ಚಿರುತೆಗಳು ಊರಿನತ್ತ ಮುಖ ಮಾಡುತ್ತಿವೆ.

ಅಹಾರ ಅರಸಿ ಕಾಡಿನಿಂದ ಅಂಕೋಲ ತಾಲೂಕಿನ ಕೊಂಡಳ್ಳಿ ಗ್ರಾಮದ ರಮಾನಂದ ಎನ್ನುವವರ ಮನೆಗೆ ಇಂದು ಬೆಳಗಿನ ಜಾವ ನುಗ್ಗಿದ್ದ ಚಿರಿತೆ ಮನೆಯ ಬಳಿ ಇದ್ದ ನಾಯಿ ಹಿಡಿಯುವ ಪ್ರಯತ್ನ ಮಾಡಿದೆ.

ಆದ್ರೆ ನಾಯಿ ಚಿರುತೆ ಬಾಯಿಯಿಂದ ತಪ್ಪಿಸಿಕೊಂಡು ಓಡಿಹೋಗಿದೆ.ಇನ್ನೇನು ಆಹಾರ ಮಿಸ್ ಆಯ್ತು ಅನ್ನುವಷ್ಟರಲ್ಲಿ ಮನೆಯಲ್ಲಿದ್ದ ಕೋಳಿಗಳಿದ್ದ ಗೂಡು ಕಾಣಿಸಿದ್ದು ಗೂಡಿನ ಒಳಕ್ಕೆ ಬಾಯಿ ಹಾಕಿ ಕೋಳಿ ಹೊಡಿದು ಚಿರುತೆ ಕಾಡಿಗೆ ಮರಳಿದೆ.

ಇತ್ತ ಮನೆಯವರು ಬೆಳಗ್ಗೆ ಗೂಡಿನಲ್ಲಿ ಕೋಳಿ ಇಲ್ಲದ್ದನ್ನು ಗಮನಿಸಿ ಯಾರೋ ಕಳ್ಳರು ಕದ್ದು ಹೋಗಿರಬೇಕು ಎಂದು ಮನೆಯಲ್ಲಿ ಅಳವಡಿಸಿದ್ದ ಸಿಸಿ ಟಿವಿ ಗಮನಿಸಿದಾಗ ಕೋಳಿ ಕಳ್ಳತನ ಮಾಡಿದ್ದು ಯಾರು ಎಂದು ನೋಡಿ ಹೌಹಾರಿದ್ದಾರೆ.

ಸದ್ಯ ಈ ವೀಡೊಯೊ ಈಗ ಊರಿನ ಜನರಲ್ಲಿ ಭಯ ತರಿಸಿದ್ದು ಊರಿನ ಜನರಿಗೆ ಚಿರತೆ ಭಯ ಕಾಡತೊಡಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ