BREAKING NEWS
Search

ಉತ್ತರ ಕನ್ನಡ ಜಿಲ್ಲೆಯಲ್ಲಿ 16 ರಂದು ಕೋವಿಡ್ ಲಸಿಕೆ: ವಿವರ ಇಲ್ಲಿದೆ.

1080

ಕಾರವಾರ :- ಉತ್ತರಕನ್ನಡ ಜಿಲ್ಲೆಯಲ್ಲೂ ಕೋವಿಡ್ ವ್ಯಾಕ್ಸಿನೇಷನ್ ವಿತರಣೆಗೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದಾಗಿ ಜಿಲ್ಲಾ ಪಂಚಾಯತ್ ಸಿಇಓ ಎಂ.ಪ್ರಿಯಾಂಗಾ ತಿಳಿಸಿದ್ದಾರೆ. ಜನವರಿ 16ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆಯ ಮೂಲಕ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದು ಅದೇ ದಿನ ಜಿಲ್ಲೆಯ ನಿಗಧಿತ ಕೇಂದ್ರಗಳಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಆರಂಭವಾಗಲಿದೆ.

ಈಗಾಗಲೇ ಜಿಲ್ಲೆಗೆ 15,090 ಡೋಸ್ ಲಸಿಕೆ ಹಂಚಿಕೆ ಮಾಡಲಾಗಿದ್ದು ಈ ಪೈಕಿ ಮೊದಲ ಹಂತದಲ್ಲಿ ಕೋವಿಶೀಲ್ಡ್ ನ ಸುಮಾರು 7000 ಡೋಸ್ ಬುಧವಾರ ರಾತ್ರಿ ಬೆಳಗಾವಿ ವಿಭಾಗದಿಂದ ಲಸಿಕಾ ವ್ಯಾನ್‌ಗಳ ಮೂಲಕ ಜಿಲ್ಲೆಗೆ ಬಂದು ತಲುಪಿದೆ. ಈ ಲಸಿಕೆಯಲ್ಲಿ 190 ಕೇಂದ್ರೀಯ ಆರೋಗ್ಯ ಕಾರ್ಯಕರ್ತರು, 14660 ರಾಜ್ಯ ಆರೋಗ್ಯ ಕಾರ್ಯಕರ್ತರು, 240 ಸಶಸ್ತ್ರ ಪಡೆಗಳ ವೈದ್ಯಕೀಯ ಸೇವಾಕರ್ತರಿಗೆ ಲಸಿಕೆ ನೀಡಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಸೇರಿ ಸುಮಾರು 14 ಸಾವಿರ ಮಂದಿಯ ಪಟ್ಟಿ ಸಿದ್ಧಪಡಿಸಲಾಗಿದೆ. ಸದ್ಯ ಮೊದಲ ಹಂತದಲ್ಲಿ 11 ಲಸಿಕಾ ಕೇಂದ್ರಗಳನ್ನ ಜಿಲ್ಲೆಯಾದ್ಯಂತ ತೆರೆಯಲಾಗಿದ್ದು ಅಲ್ಲಿ ಪ್ರತಿದಿನ ಒಂದು ಕೇಂದ್ರದಲ್ಲಿ ನೂರರಂತೆ 1,100 ಮಂದಿಗೆ ಪ್ರತಿದಿನ ಲಸಿಕೆ ನೀಡಲಾಗುತ್ತದೆ.

ಒಂದು ಲಸಿಕಾ ಕೇಂದ್ರಕ್ಕೆ ತಲಾ 5 ಸಿಬ್ಬಂದಿಯಂತೆ ಒಟ್ಟು 515 ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. 105 ಕಡೆ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಲಾಗಿದ್ದು ಜಿಲ್ಲೆಯಲ್ಲಿ 105 ಐಸ್ ಲೈನ್ಡ್ ರೆಫ್ರಿಜರೇಟರ್ (ILR), ಪಶು ಇಲಾಖೆಯ 18 ಸೇರಿ ಒಟ್ಟೂ 123 ಐಎಲ್ಆರ್ ಫ್ರಿಜರ್‌ಗಳ ವ್ಯವಸ್ಥೆಗಳಿದ್ದು ಆರೋಗ್ಯ ಇಲಾಖೆಯಿಂದ 1 ಹಾಗೂ ಪಶು ಇಲಾಖೆಯಿಂದ ಪಡೆದ 2 ವಾಕ್‌ಇನ್ ಕೂಲರ್‌ಗಳ ಮೂಲಕ ಲಸಿಕೆ ಸರಬರಾಜು ಮಾಡಲಾಗುತ್ತಿದೆ ಎಂದು ಸಿಇಓ ಪ್ರಿಯಾಂಗಾ ಮಾಹಿತಿ ನೀಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ