BREAKING NEWS
Search

ಕಾರವಾರ ಸಮುದ್ರ ಅಲೆಯಲ್ಲಿ ರಾತ್ರಿವೇಳೆ ಮೂಡುತ್ತಿದೆ ವಿಸ್ಮಯ ಬೆಳಕಿನ ಮಿಂಚು!ಈನಿದು ಬೆಳಕು ಗೊತ್ತಾ?

1417

ಕಾರವಾರ:-ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಹವಾಮಾನ ಮತ್ತು ಸಮುದ್ರದ ವಾತಾವರಣದಲ್ಲಿ ಬದಲಾವಣೆಯಿಂದಾಗಿ ಸಮುದ್ರದಲ್ಲಿ ಸೃಷ್ಟಿಯ ವೈಚಿತ್ರಗಳು ನಡೆಯುತ್ತಿದೆ.ಹೌದು ಈ ಬಾರಿ ಕಾರವಾರದ ಗೋವಾ ಗಡಿಗೆ ಅಂಟಿಕೊಂಡಿರುವ ಮಾಜಾಳಿ ಕಡಲ ಬಳಿ ಅಲೆಗಳಲ್ಲಿ ಮಿಂಚಿನ ಬೆಳಕು ಕಾಣತೊಡಗಿದೆ.

ರಾತ್ರಿವೇಳೆ ಓ ಬೆಳಕು ಗೋಚರವಾಗುತಿದ್ದು ಮಾಜಾಳಿ ಯಿಂದ ಕಪ್ಪು ಮರಳಿನ ಸಮುದ್ರ ಎಂದೇ ಪ್ರಸಿದ್ಧವಾಗಿರುವ ತಿಳಮಾತಿ ಕಡಲತೀರದವರೆಗೂ ಆವರಿಸಿದ್ದು ಕಳೆದ ಒಂದು ವಾರದಿಂದ ಸಮುದ್ರದಲ್ಲಿ ಈ ಬೆಳವಣಿಗೆ ಕಾರಣವಾಗುತ್ತಿದೆ. ಈ ಬದಲಾವಣೆಯನ್ನು ಧಾರವಾಡ ವಿಶ್ವವಿದ್ಯಾನಿಲಯದ ಕಡಲ ಜೀವಶಾಸ್ತ್ರಜ್ಞ ಪ್ರೂ.ಶಿವಕುಮಾರ್ ಹರಗಿರವರು ಗುರುತಿಸಿದ್ದಾರೆ.

ಅಲೆಗಳಲ್ಲಿ ಬೆಳಕು ಮೂಡುತ್ತಿರಲು ಕಾರಣವೇನು? ಈ ಬೆಳಕಿಗೆ ಕಾರವಾಗಿದ್ದೇನು ?

ಸಮುದ್ರದಲ್ಲಿ ಮಲೀನದಿಂದಾಗಿ
ನಾಕ್ಟುಲುಕ ಸೆಂಟನೆಲ್ಸ್ (noctiluca seintillans )ಎಂಬ ಪಾಚಿ ಹೇರಳವಾಗಿ ಬೆಳೆದಿದ್ದು ರಾತ್ರಿ ವೇಳೆ ಸಮುದ್ರದಲ್ಲಿ ಮಿಂಚಿನಂತೆ ಕಾಣುತಿದ್ದು ಬೆಳಕನ್ನು ಹೊರಸೂಸುತ್ತಿದೆ.ತನ್ನಲ್ಲಿ ಬೆಳಕನ್ನು ಸೂಸುವ ಶಕ್ತಿ ಹೊಂದಿರುವ ಇದು ಸಮುದ್ರಕ್ಕೆ ಸೇರುವ ತ್ಯಾಜ್ಯಗಳ ಕನಿಜಾಂಶದಿಂದ ಹೆಚ್ಚು ಬೆಳೆದಿದೆ. ಈ ಹಿಂದೆ 2011 ರಲ್ಲಿ ಮಂಗಳೂರಿನಲ್ಲಿ 2017 ರಲ್ಲಿ ಉಡುಪಿ,ಕಾರವಾರದ ಕಡಲತೀರದ ಬಳಿ ಹೇರಳವಾಗಿ ಕಾಣಿಸಿಕೊಂಡಿದ್ದವು.ಇವು ಹೆಚ್ಚಾದಾಗ ಸಮುದ್ರ ಹಸಿರಿನಂತೆ ಕಂಗೊಳಿಸುತ್ತವೆ.

ಮೀನುಗಾರಿಕೆಗೂ ಬೀರಲಿದೆ ಇದರ ಪರಿಣಾಮ!

ಸಮುದ್ರದಲ್ಲಿ ಅಲೆಗಳಲ್ಲಿ ಮೂಡಿದ ವಿಡಿಯೋ ನೋಡಿ:-

https://youtu.be/6iO4PXj-1FA

ಆಹಾರ ಸಿಕ್ಕಾಗ ಅತಿಯಾಗಿ ಬೆಳೆಯುತ್ತದೆ. ತ್ಯಾಜ್ಯ ಹೆಚ್ಚು ಸಮುದ್ರ ಸೇರುವುದರಿಂದ ಇವು ಹೆಚ್ಚು ಬೆಳೆಯುತ್ತದೆ. ತ್ಯಾಜ್ಯದ ಖನಿಜಾಂಶ ಹಾಗೂ ಸೂರ್ಯನ ಬೆಳಕು ಇವುಗಳ ಆಹಾರ‌,ಪಶ್ಚಿಮ ಕರಾವಳಿಯಲ್ಲಿ ಆಗುತ್ತಿರುವ ಹೆಚ್ಚಿನ ಮಾಲಿನ್ಯ ಇವುಗಳ ಬೆಳವಣಿಗೆಗೆ ಕಾರಣವಾಗಿದೆ.
ಸದ್ಯ ಕಾರವಾರದ ಸಮುದ್ರದಲ್ಲಿ ಈ ಪಾಚಿಗಳು ಎರಡು ಮೂರು ದಿನ ಉಳಿಯಬಹುದು, ಬೇಸಿಗೆಯಲ್ಲಿ ಜಾಸ್ತಿ ಪ್ರಮಾಣದಲ್ಲಿ ಪಾಚಿ ಬೆಳೆಯುತ್ತಿದೆ.ಏಳು ದಿನ ಇವು ಬದುಕುತ್ತವೆ ನಂತರ ಎರಡುಪಟ್ಟಾಗಿ ಬೆಳೆಯುತ್ತದೆ,ಇವುಗಳಲ್ಲಿ ರೆಡ್,ಗ್ರೀನ್ ಟೈಡ್ ಎಂಬ ಜಾತಿಯ ಪ್ರಭೇದ ಪಾಚಿಗಳಿವೆ .ಇವುಗಳು ಟಾಕ್ಸಿನ್ ಹೆಚ್ಚು ಉತ್ಪತ್ತಿ ಮಾಡುತ್ತದೆ. ಕೆಲವೊಮ್ಮೆ ಇವುಗಳು ಉಪಯುಕ್ತವಾದ್ರೆ ಹಲವು ಬಾರಿ ಮಾರಕವಾಗಿ ಪರಿಣಮಿಸುತ್ತದೆ ಪರಿಸರಕ್ಕೆ ಪೂರಕವಲ್ಲ ಎಂಬುದು ಸಂಶೋಧಕರ ಮಾತು.

ಜಿಲ್ಲೆಯ ಮೀನುಗಾರರು ಈಗಾಗಲೇ ಮತ್ಸ್ಯ ಕ್ಷಾಮದಿಂದ ಬಳಲುತಿದ್ದಾರೆ.ಈ ಈ ಸಸ್ಯಗಳು ಬೆಳದಿದ್ದರಿಂದ ಮೀನುಗಾರಿಕೆ ಮೇಲೂ ಪರಿಣಾಮ ಬೀರುವ ಜೊತೆಗೆ ಮಾರಕವಾಗಿದ್ದು ಪರಿಸರದ ಅಸಮತೋಲನಕ್ಕೆ ಸಾಕ್ಷಿಯಾಗಿದೆ ಎನ್ನುವುದು ಸಂಶೋಧನೆ ನಿರತ ಕಡಲ ಜೀವಶಾಸ್ತ್ರಜ್ಞ ಡಾ.ಶಿವಕುಮಾರ್ ಹರಗಿ ರವರ ಅಭಿಪ್ರಾಯವಾಗಿದ್ದು ಈ ಪಾಚಿಗಳು ಬೆಳೆಯುವುದರಿಂದ ಮೀನುಗಳು ದೂರ ಹೋಗುತ್ತದೆ ಇದು ಮತ್ಸ್ಯ ಕ್ಷಾಮದ ಸೂಚನೆ
ಈ ಪಾಚಿ ಸಸ್ಯ ಆಕ್ಸಿಜನ್ ತೆಗೆದುಕೊಂಡು ಬೆಳಕನ್ನು ಹೊರಸೂಸುತ್ತದೆ. ದಕ್ಷಿಣ ಕರಾವಳಿಯಲ್ಲಿ ಹೆಚ್ಚು ಪತ್ತೆಯಾಗುತ್ತಿದೆ.

ಸಮುದ್ರಕ್ಕೆ ಬಂತೇ ಕಂಠಕ? ಮೀನುಗಾರರಲ್ಲಿ ಹುಟ್ಟಿದ ಭಯ?

ಕಳೆದ ಹಲವು ದಿನದಿಂದ ಸಮುದ್ರದಲ್ಲಿ ಆಗುವ ಈ ಬೆಳವಣಿಗೆ ಮೀನುಗಾರರಲ್ಲಿ ಭಯ ಮೂಡಿಸಿದೆ. ಸ್ಥಳೀಯ ಮೀನುಗಾರರು ಹೇಳುವಂತೆ ಈ ರೀತಿ ಮಿಂಚುಗಳ ಬೆಳಕು ಬಂದ್ರೆ ಸಮುದ್ರದಲ್ಲಿ ಮೀನುಗಳ ಬರದ ಸೂಚನೆ .ಇದು ಸಮುದ್ರ ಮುನಿಸಿಕೊಂಡ ಪರಿಣಾಮ ಇದರಿಂದ ಮತ್ಸ್ಯ ಬರ ಬರುತ್ತದೆ ಎನ್ನುತ್ತಾರೆ.
ಇನ್ನು ಸಂಶೋಧಕರು ಕೂಡ ಇದನ್ನು ಪುಷ್ಟಿಕರಿಸಿದ್ದು ಸಮುದ್ರಕ್ಕೆ ಮಲೀನ ನಿರುಗಳು ಅತೀ ಹೆಚ್ಚು ಸೇರುತ್ತಿದೆ ಇದರಿಂದಾಗಿ ಈ ಪಾಚಿಗಳು ಹೇರಳವಾಗಿ ಬೆಳೆಯಲು ಕಾರಣವಾಗಿದೆ. ಇದು ಸಮುದ್ರದ ವಾತಾವರಕ್ಕೆ ಪೂರಕವಾಗಿಲ್ಲ.ಇದರ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎನ್ನುತ್ತಾರೆ.
ಒಟ್ಟಿನಲ್ಲಿ ಕಳೆದ ಒಂದು ವರ್ಷಗಳಿಂದ ಜಿಲ್ಲೆಯ ಕರಾವಳಿ ಭಾಗದ ಸಮುದ್ರ ಭಾಗದಲ್ಲಿ ನೈಸರ್ಗಿಕ ಬದಲಾವಣೆ ಹೆಚ್ಚಾಗುತಿದೆ.




Leave a Reply

Your email address will not be published. Required fields are marked *