BREAKING NEWS
Search

add

ಅಕ್ರಮ ಗೋ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ-ಸಚಿವ ಪ್ರಭು ಚವ್ಹಾಣ್

270

ಕಾರವಾರ :- ರಾಜ್ಯದಲ್ಲಿ ಇಂದಿನಿಂದ ಗೋ ಹತ್ಯಾ ನಿಷೇಧ ಜಾರಿಯಾದ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋವುಗಳನ್ನ ಕಸಾಯಿಖಾನೆಗೆ ತೆಗೆದುಕೊಂಡು ಹೋದರೆ ಸಾರ್ವಜನಿಕಜರು ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಅಕ್ರಮ ಗೋ ಸಾಗಾಟ ಕಂಡುಬಂದಲ್ಲಿ ಪ್ರಕರಣ ದಾಖಲಾಗುತ್ತದೆ. ಅಕ್ರಮವಾಗಿ ಗೋವುಗಳನ್ನ ಸಾಗಿಸಿದವರ ಮೇಲೆ 50 ಸಾವಿರದಿಂದ 5ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದಿದ್ದಾರೆ.

ಗೋರಕ್ಷಣೆ ಸಂಬಂಧ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಯತ್ನ ನಡೆದಿದೆ. ಗೋ ಸಂರಕ್ಷಣೆಗೆ ಎಲ್ಲರೂ ಸಹಕರಿಸಬೇಕು,ಹಕ್ಕಿ ಜ್ವರ, ಹಂದಿ ಜ್ವರ
ಇಲಾಖೆ ಅಧಿಕಾರಿಗಳು ಅಲರ್ಟ್ ಆಗಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದೇನೆ.

ಕಾರವಾರ ಜಿಲ್ಲೆಯಲ್ಲಿ ಬೀಡಾಡಿ ದನಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಬಿಡಾಡಿ ದನಗಳನ್ನು ಗೋ ಶಾಲೆಗೆ ಕಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಎರಡು ಗೋ ಶಾಲೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರವಾರದಲ್ಲಿ ಪಶುಸಂಗೋಪನಾ ಸಚಿವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಹರೀಶ್ ಕಯಮಾರ್ ಕೆ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಉಪಸ್ಥಿತರಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ