BREAKING NEWS
Search

ಮುರುಡೇಶ್ವರ ಶಿವನ ವಿಗ್ರಹ ‘ಐಸಿಸ್ ಪತ್ರಿಕೆಯಲ್ಲಿ? ವಿಗ್ರಹದ ಶಿರಭಾಗ ಕತ್ತರಿಸಿ ಐಸಿಸ್ ಧ್ವಜದ ಚಿತ್ರ ಹಾಕಿರುವ ಮತಾಂಧರು!

3579

ಕಾರವಾರ: ದೇಶದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರದ ಶಿವನ ಬೃಹತ್ ಪ್ರಯಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು ಬಿದ್ದಿದೆ ಎಂಬ ಭಯಾನಕ ಮಾಹಿತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟರ್ ಮತ್ತು ಫೇಸ್ಬುಕ್ ಪೋಸ್ಟ್ ಹಾಕಿರುವ ಅಂಶುಲ್ ಸಕ್ಸೇನಾ ಎಂಬ ಯುವಕ, ಐಸಿಸ್ ಮುಖವಾಣಿ ಪತ್ರಿಕೆ ‘the VOICE OF HIND’ನಲ್ಲಿ ಮುರುಡೇಶ್ವರದ ಶಿವನ ಪ್ರತಿಮೆಯ ಪೋಟೋ ಹಾಕಿದ್ದು, ಅದರ ಮೇಲೆ ‘Its time to Break False Gods’ ಎಂ ಬರಹವನ್ನು ಹಾಕಲಾಗಿದೆ. ಜೊತೆಗೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ಅದರ ತುತ್ತ ತುದಿಗೆ ಐಸಿಸ್ ರೀತಿಯ ಧ್ವಜ ಹಾರಾಡುವಂತೆ ಚಿತ್ರಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಈ ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ಫೇಸ್ ಬುಕ್ ಹಾಗೂ ಟ್ಟಿಟರ್ ನಲ್ಲಿ ಆಗ್ರಹಿಸಿದ್ದಾರೆ.

ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರಕಾರ ಅವಕಾಶ ನೀಡಬಾರದು

ಎಂಬುದು ಸಾರ್ವಜನಿಕರ ಆಗ್ರಹಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ