BREAKING NEWS
Search

ಕಾರವಾರ-ಪ್ಲಾಸ್ಟಿಕ್ ನಿಷೇಧ ತಂತು ಮಹಿಳಾ ಸಂಘಗಳಿಗೆ ಅದೃಷ್ಟ!1200₹ದುಡಿಯುತಿದ್ದಾರೆ ಬಡ ಮಹಿಳೆಯರು!

275

ಕಾರವಾರ:-ಕೇಂದ್ರ ಸರ್ಕಾರ ಪ್ಲಾಸ್ಲಿಕ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತಂದಿದೆ. ಇದರಿಂದಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಿ ಬಟ್ಟೆ ಹಾಗೂ ಪೇಪರ್ ಬ್ಯಾಗ್ ಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ.
ಆದರೇ ಈ ಬ್ಯಾಗುಗಳು ಅಂಗಡಿಗಳಿಂದ ಕೊಂಡುಕೊಳ್ಳುವ ಗ್ರಾಹಕರಿಗೆ ಹಾಗೂ ಅಂಗಡಿಯವರಿಗೆ ತುಟ್ಟಿಯಾಗುತಿತ್ತು. ಇದರಿಂದಾಗಿ ಕದ್ದುಮುಚ್ಚಿ ಪ್ಲಾಸ್ಟಿಕ್ ಬ್ಯಾಗ್ ಗಳು ಬಿಕರಿಯಾಗುತಿತ್ತು.


ಇದನ್ನು ಮನಗಂಡ ಕಾರವಾರ ನಗರಸಭೆ ಆಡಳಿತ ಪ್ರತಿ ದಿನ ಅಂಗಡಿಗಳಿಗೆ ದಾಳಿ ನಡೆಸಿ ಈ ವರೆಗೆ ಎರಡು ಕ್ವಿಂಟಾಲ್ ಪ್ಲಾಸ್ಟಿಕ್ ಬ್ಯಾಗ್ ವಶಪಡಿಸಿಕೊಂಡರೆ,ಉಪಯೋಗಿಸಿ ಬಿಸಾಡಿದ ಪ್ಲಾಸ್ಟಿಕ್ ಸಂಗ್ರಹಿಸಿ ಈಗಾಗಲೇ 40 ಟನ್ ಪ್ಲಾಸ್ಟಿಕ್ ಅನ್ನು ರೀ ಸೈಕ್ಲಿಂಗ್ ಮಾಡಿ ದಾಲ್ಮಿಯ ಸಿಮೆಂಟ್ ಕಾರ್ಖಾನೆಗೆ ಕಳುಹಿಸಿದೆ. ಪ್ರತಿ ದಿನ ಏಳು ಕುಂಟಾಲ್ ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಕೇವಲ ಕಾರವಾರ ನಗರದಿಂದ ಉತ್ಪತ್ತಿಯಾಗುತ್ತದೆ. ಹೀಗಾಗಿ ಕಾರವಾರ ನಗರಸಭೆ ಆಯುಕ್ತ ಯೋಗೀಶ್ವರ್ ರವರು ಕಠಿಣ ಕ್ರಮ ಕೈಗೊಂಡಿದ್ದಾರೆ. ಆದರೂ ಹೋಟೆಲ್ ,ಬೀದಿ ಬದಿಯ ಅಂಗಡಿಗಳು ಕದ್ದುಮುಚ್ಚಿ ಪ್ಲಾಸ್ಟಿಕ್ ಮಾರಾಟವನ್ನು ಮಾಡಿ ಪ್ರತಿ ಬಾರಿ ಸಿಕ್ಕಿಕೊಂಡು ದಂಡ ತೆತ್ತುತಿದ್ದುದನ್ನು ಹಾಗೂ ಅವರ ಅನಿವಾರ್ಯತೆಯನ್ನು ಮನಗಂಡು ಬಟ್ಟೆ ಬ್ಯಾಗ್ ಗಳನ್ನು ಅವರಿಗೆ ನೀಡುವ ನಿರ್ಧಾರ ತೆಗೆದುಕೊಂಡರು.

ಇದರ ಪ್ರತಿಫಲವಾಗಿ ಹಾಗೂ ಬಡ ಮಹಿಳೆಯರಿಗೆ ಸಹಾಯ ಆಗುವಂತೆ ಕಾರವಾರ ನಗರದ ಮಹಿಳಾ ಸಹಕಾರ ಸಂಘ ಸಂಸ್ಥೆಯನ್ನು ಬ್ಯಾಗ್ ತಯಾರಿಕೆಗೆ ಪ್ರೇರೇಪಿಸಿದ್ದಲ್ಲದೇ ಅವರ ಮೂಲಕ ಬಟ್ಟೆ ಬ್ಯಾಗ್ ತಯಾರಿಸಿ ನೇರವಾಗಿ ನಗರಸಭೆಯೇ ಹೋಟಲ್ ಗಳಿಗೆ ಸೇರಿದಂತೆ ಅಂಗಡಿ ಮುಂಗಟ್ಟುಗಳಿಗೆ ಪ್ರತಿ ಬ್ಯಾಗಿಗೆ 3 ರುಪಾಯಿಯಂತೆ ಕೊಂಡುಕೊಲ್ಳುವ ವೇದಿಕೆ ಒದಗಿಸಿಕೊಟ್ಟಿತು.


ಇದರ ಪ್ರತಿಫಲವಾಗಿ ಕಾರವಾರದ ಜೈ ಸಂತೋಷಿನಿ ಮಾತಾ ಮಹಿಳಾ ಸಹಕಾರ ಸಂಘದ ಮಹಿಳೆಯರು ಬ್ಯಾಗ್ ಗಳನ್ನು ಹುಲಿಯುವ ಕಾರ್ಯ ಆರಂಭಿಸಿದ್ದಾರೆ.ಒಂಬತ್ತು ಜನರಿರುವ ಈ ಚಿಕ್ಕ ಸಂಘದಲ್ಲಿ ಏಳು ಜನ ಮಹಿಳೆಯರು ಹುಲಿಗೆ ಯಂತ್ರ ಹೊಂದಿದ್ದು ಮನೆಯಲ್ಲಿ ಬಿಡುವಿನ ಸಮಯದಲ್ಲಿ ಬಟ್ಟೆ ಚೀಲವನ್ನು ಹುಲಿದು ಕೊಡುತಿದ್ದಾರೆ.

ಸದ್ಯ ಹೋಟಲ್ ಹಾಗೂ ಅಂಗಡಿಗೆ ಬಟ್ಟೆ ಬ್ಯಾಗ್ ಗಳನ್ನು ತಯಾರಿಸಿ ನೀಡುತಿದ್ದು ಪ್ರತಿ ದಿನ ನೂರು ಬಟ್ಟೆಯ ಒಂದು ಬಂಡಲ್ ನಂತೆ ನಾಲ್ಕು ಬಂಡಲ್ ನನ್ನು ಒಬ್ಬರು ತಯಾರಿಸಿ ನೀಡುತಿದ್ದು ದಿನಕ್ಕ 1200₹ ರುಪಾಯಿಗೂ ಹೆಚ್ಚು ಹಣ ಗಳಿಸುತಿದ್ದಾರೆ.

ಬ್ಯಾಗ್ ತಯಾರಿಸುತ್ತಿರುವ ಸಂಘದ ಪೂಜಾ ಸಂಜೀವ್ ಅರ್ಗೆಕರ್ ಹೇಳುವಂತೆ ನಾನೊಬ್ಬ ಗೃಹಿಣಿ ಮನೆಯ ಕೆಲಸ ಮುಗಿಸಿ ಸಂಜೆ ವೇಳೆ ಬಟ್ಟೆ ಚೀಲವನ್ನು ಹುಲಿಯುತ್ತೇನೆ ಇದರಿಂದ ನನ್ನ ಗಳಿಕೆ ಹೆಚ್ಚಾಗಿದ್ದು ಕುಟುಂಬಕ್ಕೆ ಸಹಕಾರವಾಗುತ್ತಿದೆ.

ಮಹಿಳೆಯರು ತಯಾರಿಸಿದ ಬಟ್ಟೆಗಳ ಬ್ಯಾಗ್.


ನಗರಸಭೆಯೇ ನೇರವಾಗಿ ಹೋಟಲ್ ಮತ್ತು ಅಂಗಡಿಗಳ ನಡುವೆ ನಮ್ಮ ಬಟ್ಟೆ ಬ್ಯಾಗ್ ತೆಗೆದುಕೊಳ್ಳುವಂತೆ ಒಪ್ಪಂದ ಮಾಡಿಸಿದೆ.ಇದರಿಂದಾಗಿ ನಾವು ಗ್ರಾಹಕರನ್ನು ಹುಡುಕಿ ಅಲೆಯುವುದು ತಪ್ಪಿದೆ, ಬ್ಯಾಗ್ ಗೆ ಹೆಚ್ಚಿನ ಬೇಡಿಕೆ ಬರುತ್ತಿದೆ ಎನ್ನುತ್ತಾರೆ.

ಕಾರವಾರ ದಲ್ಲಿ ಎಟಿಎಂ ನಲ್ಲಿ ಹಣ ಸಿಗುವಂತೆ ಎನಿಟೈಮ್ ಬ್ಯಾಗ್ ಮಿಷನ್ ಗಳು!

ಕೆಲವೇ ದಿನದಲ್ಲಿ ಈ ಮಹಿಳೆಯರು ತೆಯಾರಿಸಿದ ಬಟ್ಟೆ ಬ್ಯಾಗ್ ಗಳನ್ನು ನೇರವಾಗಿ ನಗರಸಭೆ ಕರೀದಿಸಿ ಎಟಿಎಮ್ ಗಳು ಹೇಗಿವೆಯೋ ಅದೇ ಮಾದರಿಯಲ್ಲಿ ಎನಿಟೈಮ್ ಬ್ಯಾಗ್ ಮಿಷನ್ ಗಳನ್ನು ನಗರದಲ್ಲಿ ಅಳವಡಿಸಲು ಸಿದ್ದತೆ ನಡೆಸಿದೆ.
ಈ ಮಿಷನ್ ನಲ್ಲಿ ಐದು ರುಪಾಯಿ ಕಾಯಿನ್ ಹಾಕಿದ್ರೆ ಇಂದು ಬಟ್ಟೆ ಬ್ಯಾಗ್ ಬರುವಂತೆ ವ್ಯವಸ್ತೆ ರೂಪಿಸಿದ್ದು ಸಿದ್ದತೆ ನಡೆದಿದೆ ಎಂದು ನಗರಸಭಾ ಆಯುಕ್ತ ಯೋಗೀಶ್ವರ್ ತಿಳಿಸಿದ್ದಾರೆ.

ಹೀಗಾಗಿ ಈಗಾಗಲೇ ಹಲವು ಮಹಿಳೆಯರು ಬಟ್ಟೆ ಬ್ಯಾಗ್ ತಯಾರಿಸುವಲ್ಲಿ ನಿರತರಾಗಿದ್ದು ತಮ್ಮ ಫ್ರೀ ಟೈಮ್ ನಲ್ಲಿ ಬಟ್ಟೆ ಬ್ಯಾಗ್ ಹುಲಿದು ಕೈತುಂಬ ಹಣ ಗಳಿಸುತಿದ್ದು ಪ್ಲಾಸ್ಟಿಕ್ ನಿಷೇಧ ಈ ಬಡ ಮಹಿಳೆಯರ ಬಾಳಲ್ಲಿ ಬೆಳಕಾಗುತ್ತಿದೆ.




Leave a Reply

Your email address will not be published. Required fields are marked *