ಸಿದ್ದಾಪುರದಲ್ಲಿ ಆಯಾತಪ್ಪಿ ಹೊಳೆಗೆ ಬಿದ್ದ ಕಾರು ಒಂದು ದಿನದ ನಂತರ ಪತ್ತೆ! ಯುವತಿ ಸೇರಿ ಮೂರುಜನ ಜಲಸಮಾಧಿ.

3773

ಶಿರಸಿ :ಕಾರಿನ ನಿಯಂತ್ರಣ ತಪ್ಪಿ ಉಂಚಳ್ಳಿ ಜಲತಾಪಕ್ಕೆ ಹೋಗಿ ವಾಪಾಸ್ ಬರುತ್ತಿದ್ದ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಸೇರಿ ಒಟ್ಟೂ ಮೂವರು ಕಾರಿನ ಸಮೇತ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಸಿದ್ದಾಪುರ ತಾಲೂಕಿನ ಕೊಡ್ನಮನೆಯಲ್ಲಿ ನಡೆದಿದೆ.

ಬುಧವಾರ ಸಂಜೆಯ ವೇಳೆಗೆ ಘಟನೆ ಜರುಗಿದ್ದು, ಗುರವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಕಾರಿಗೆ ಧಾರವಾಡದ ನೊಂದಣಿ ಸಂಖ್ಯೆಯಿದ್ದು, ಹುಬ್ಬಳ್ಳಿಯವರು ಎನ್ನಲಾಗಿದೆ. ಮೂವರೂ ೨೫ ವರ್ಷದ ಒಳಗಿನವರಾಗಿದ್ದು, ಸಿದ್ದಾಪುರದ ಉಂಚಳ್ಳಿ ಜಲತಾಪಕ್ಕೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.‌

ಪ್ರವಾಸದಿಂದ ಹಿಂತಿರುಗಿ ಬರುವಾಗ ಕೋಡ್ನಗದ್ದೆ ಸಮೀಪದ ತಿರುವಿನಲ್ಲಿ ಆಯತಪ್ಪಿ ಕೋಡ್ನಗದ್ದೆ ಹೊಳೆಗೆ ಕಾರು ಬಿದ್ದಿದ್ದು, ನೀರಿನ ರಭಸಕ್ಕೆ ೧೦೦ ಮೀ. ತೆಲಿಕೊಂಡು ಹೋಗಿದೆ. ಗುರವಾರ ಸ್ಥಳೀಯರು ಹೊಳೆಯಲ್ಲಿ ಕಾರನ್ನು ಗಮನಿಸಿದ್ದು, ಕಾರಿನಿಂದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಆಗಮಿಸಿದ್ದು, ಹೆಚ್ಚಿನ ವಿವರ ತಿಳಿದು ಬರಬೇಕಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ