BREAKING NEWS
Search

ಮುರುಡೇಶ್ವರಕ್ಕೆ ಹೆಚ್ಚಿನ ಭದ್ರತೆ ,ಕರಾವಳಿ ಭಾಗದಲ್ಲಿ ಭದ್ರತೆ ಹೆಚ್ಚಿಸಲು ಕೇಂದ್ರದ ನೆರವು-ಗೃಹ ಸಚಿವ ಅರಗಾ ಜ್ಞಾನೇಂದ್ರ.

491

ಕಾರವಾರ :- ಮುರ್ಡೇಶ್ವರ ದೇವಸ್ಥಾನದ ವಿಗ್ರಹ ಧ್ವಂಸಗೊಳಿಸಿ ಐಸಿಸ್ ಧ್ವಜ ನೆಟ್ಟ ಚಿತ್ರ ಹರಿಬಿಟ್ಟವರ ಕುರಿತು ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವದು. ದೇವಸ್ಥಾನಕ್ಕೆ ಸೋಮವಾರದಿಂದಲೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಅರಗಾ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಸಿದ್ದಾಪುರ ತಾಲ್ಲೂಕಿನ ಕಲಗದ್ದೆ ಗ್ರಾಮಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಅವರು ಮಾಧ್ಯಮದವರ ಜತೆ ಮಾತನಾಡಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ನೆರವು ಕೇಳಿದ್ದೇವೆ. ಕರಾವಳಿ ಕಾವಲು ಪಡೆಗೆ 30 ಸುಸಜ್ಜಿತ ಬೋಟ್‌ಗಳ ಬೇಡಿಕೆಯನ್ನೂ ಇಡಲಾಗಿದೆ,ದೇಶದ್ರೋಹ ಚಟುವಟಿಕೆಯಲ್ಲಿ ಭಟ್ಕಳವೂ ಸೇರಿದಂತೆ ಕರಾವಳಿ ಭಾಗದ ಹಲವು ಯುವಕರು ಪಾಲ್ಗೊಳ್ಳುತ್ತಿರುವ ಸಂಶಯವಿದ್ದು, ಈ ಬಗ್ಗೆ ನಿಗಾ ಇಡಲಾಗುತ್ತಿದೆ. ಮೋದಿ ಸರ್ಕಾರ ಬಂದ ಮೇಲೆ ಬಾಂಬ್ ಸ್ಫೋಟದಂತಹ ಚಟುವಟಿಕೆ ತಗ್ಗಿದೆ’ ಎಂದರು.
ಇನ್ನು ಎಸ್‌.ಡಿ.ಪಿ.ಐ., ಪಿ.ಎಫ್.ಐ. ಸಂಘಟನೆ ನಿಷೇಧಿಸುವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು, ಎಂದರು.

ಕಾಂಗ್ರೆಸ್ ನಮ್ಮ ವಿರೋಧಿ-ಜೆಡಿಎಸ್ ನಮ್ಮ ಹತ್ತಿರದವರು-ಅರಗಾ

ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು
ಕಾಂಗ್ರೆಸ್‌ ನಮ್ಮ ವಿರೋಧಿ. ಅವರಿಗಿಂತ ಜೆಡಿಎಸ್‌ನವರು ಹತ್ತಿರದವರು. ಅವರ ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ಪಡೆದರೆ ತಪ್ಪೇನಿಲ್ಲ.
ಕಾಂಗ್ರೆಸ್‌ಗೆ ಒಳ ಒಪ್ಪಂದ ಮಾಡಿಕೊಂಡ ರೂಢಿ ಇದೆ. ನಾವು ಅವರ ರೀತಿಯಲ್ಲಿ ಸಾಗುವುದಿಲ್ಲ. ನಮಗೆ ಕಾಂಗ್ರೆಸ್‌ ಸೋಲಿಸುವದಷ್ಟೆ ಗುರಿ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಅವರ ಬೆಂಬಲ ಪಡೆದು ಹೆಚ್ಚು ಲೀಡ್ ಪಡೆಯುತ್ತೇವೆ ಎಂದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ