BREAKING NEWS
Search

ಶಿರಸಿಯಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗದ್ದಲ!ಮಧ್ಯ ಪ್ರವೇಶಿಸಿದ ಪೋಲಿಸರು!

716

ಕಾರವಾರ :-ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರಕ್ಕೆ ತೆರಳಿ ದ್ದ ಮಾಜಿ ಸಚಿವ ದೇಶಪಾಂಡೆ ಕಾರಿನಲ್ಲಿ ವಾಪಾಸ್ ತೆರಳುವಾಗ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದಾಗ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗದ್ದಲ ನಡೆದ ಘಟನೆ ಶಿರಸಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರಕ್ಕಾಗಿ ರಾಮಾಪುರಕ್ಕೆ ಆಗಮಿಸಿದ ಮಾಜಿ ಸಚಿವ ಆರ್ ವಿ ದೇಶಪಾಂಡೆ ಕಾರಿನಲ್ಲಿ ವಾಪಾಸ್ ತೆರಳುವಾಗ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದರು.

ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕನ ಪರ ಘೋಷಣೆ ಕೂಗಿದರು.
ಇಬ್ಬರು ತಮ್ಮ ತಮ್ಮ ನಾಯಕರ ಪರ ಘೋಷಣೆ ಕೂಗಿದ ಕಾರಣ ಗದ್ದಲ ಪ್ರಾರಂಭವಾಗಿ
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕು ನುಗ್ಗಾಟ ನಡೆಯಿತು.ಈ ಸಂದರ್ಭದಲ್ಲಿ ಪೋಲಿಸರು ಮಧ್ಯ ಪ್ರವೇಶಿಸಿ ಗದ್ದಲವನ್ನು ಹತೋಟಿಗೆ ತಂದರು.
Leave a Reply

Your email address will not be published. Required fields are marked *