ಯಲ್ಲಾಪುರ: ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

296

ಕಾರವಾರ(ಮೇ20):- ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಂಡ್ರಮನೆಯಲ್ಲಿ ಸಂಭವಿಸಿದೆ.

ತಾಲೂಕಿನ ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಹಂಡ್ರಮನೆಯ ನಿವಾಸಿ ರಾಮಕೃಷ್ಣ ಅನಂತ ಭಟ್ಟ (65) ಮೃತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಹಂಡ್ರಮನೆಯ ಅರಣ್ಯ ಪ್ರದೇಶದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಪೊಲೀಸ್ ಮಾಹಿತಿಯಿಂದ ತಿಳಿದುಬಂದಿದೆ.
ಘಟನೆ ಕುರಿತು ಯಲ್ಲಾಪುರ ಪೊಲೀಸ್ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!