BREAKING NEWS
Search

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದಪ್ರತಾಪ್ ಶಟ್ಟಿ.

521

ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಸೂಚನೆ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜಿನಾಮೆ ಸಲ್ಲಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ರಾಜಿನಾಮೆ ಸಲ್ಲಿಸಲು ಸಹಮತ ದೊರೆತಿತ್ತು.

2018 ಡಿ 12 ರಿಂದ ಪ್ರತಾಪ್ ಚಂದ್ರ ಶೆಟ್ಟಿ ವಿಧಾನಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!