ಕಿರುವತ್ತಿಯಲ್ಲಿ ಭೀಕರ ಅಪಘಾತ-ನಾಲ್ವರು ಸಾವು!

1206

ಕಾರವಾರ : ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭಿವಿಸಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿ

ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಹೆದ್ದಾರಿ 63ರಲ್ಲಿ ನಡೆದಿದೆ.

ಹುಬ್ಬಳ್ಳಿ‌ ಕಡೆಯಿಂದ‌ ಬರುತ್ತಿದ್ದ‌ ದೆಹಲಿ ನೋಂದಣಿ ಇರುವ ಕಾರು ಹಾಗೂ ಯಲ್ಲಾಪುರ‌ ಕಡೆಯಿಂದ ಹುಬ್ಬಳ್ಳಿ ಕಡೆ‌ ಹೋಗುತ್ತಿದ್ದ‌‌ ಲಾರಿ ಮಧ್ಯೆ ಅಪಘಾತ ನಡೆದಿದೆ.

ಅತೀ ವೇಗದ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಎಲ್ಲರೂ ಸಾವನ್ನಪ್ಪಿರುವುದರಿಂದ ಅವರ‌ ಹೆಚ್ಚಿನ‌ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ